ಅಪಘಾತ
–ಪ್ರಾತಿನಿಧಿಕ ಚಿತ್ರ
ಕೊಲಂಬೊ: ಶ್ರೀಲಂಕಾದಲ್ಲಿ ಸರ್ಕಾರಿ ಬಸ್‌ವೊಂದು ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 21 ಜನರು ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಧ್ಯ ಪ್ರಾಂತ್ಯದ ಕೋಟ್ಮಲೆ ಪ್ರದೇಶದಲ್ಲಿ ಎಡಕ್ಕೆ ತಿರುವು ತೆಗೆದುಕೊಳ್ಳಲು ಸಂದರ್ಭದಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಸ್ ದಕ್ಷಿಣ ಯಾತ್ರಾ ಸ್ಥಳವಾದ ಕತರಗಮದಿಂದ ಕುರುನಗರಕ್ಕೆ 75 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದಾಗ 100 ಮೀಟರ್ ಆಳದ ಕಂದಕಕ್ಕೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅವಘಡದಲ್ಲಿ 21 ಮಂದಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಗಾಯಗೊಂಡಿರುವ 30ಕ್ಕೂ ಹೆಚ್ಚು ಪ್ರಯಾಣಿಕರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಸಾರಿಗೆ ಸಚಿವ ಪ್ರಸನ್ನ ಗುಣಸೇನ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.