ADVERTISEMENT

ಲಸಿಕೆ ಪಡೆಯಿರಿ, ಕೊರೊನಾ ಸೋಂಕು ಏರದಂತೆ ತಡೆಯಿರಿ: ಮ್ಯಾಕ್‌ಕೊನೆಲ್‌ ಒತ್ತಾಯ

ಅಮೆರಿಕದ ಸೆನಟ್‌ನ ರಿಪಬ್ಲಿಕನ್ ಪಕ್ಷದ ಸದಸ್ಯ

ಏಜೆನ್ಸೀಸ್
Published 21 ಜುಲೈ 2021, 5:19 IST
Last Updated 21 ಜುಲೈ 2021, 5:19 IST
ಅಮೆರಿಕದ ವಾಷಿಂಗ್ಟನ್‌ ಡಿಸಿಯಲ್ಲಿ ಮಂಗಳವಾರ ಸಾಮಾಜಿಕ ಕಾರ್ಯಕರ್ತರೊಬ್ಬರು ಕೋವಿಡ್‌ ಲಸಿಕೆ ಹಾಕಿಸಿಕೊಳ್ಳುವಂತೆ ಜನರಲ್ಲಿ ಮನವಿ ಮಾಡಿದ ದೃಶ್ಯ
ಅಮೆರಿಕದ ವಾಷಿಂಗ್ಟನ್‌ ಡಿಸಿಯಲ್ಲಿ ಮಂಗಳವಾರ ಸಾಮಾಜಿಕ ಕಾರ್ಯಕರ್ತರೊಬ್ಬರು ಕೋವಿಡ್‌ ಲಸಿಕೆ ಹಾಕಿಸಿಕೊಳ್ಳುವಂತೆ ಜನರಲ್ಲಿ ಮನವಿ ಮಾಡಿದ ದೃಶ್ಯ   

ವಾಷಿಂಗ್ಟನ್‌: ಇನ್ನೂ ಕೋವಿಡ್‌ ಲಸಿಕೆ ತೆಗೆದುಕೊಳ್ಳದವರು, ತಕ್ಷಣವೇ ಲಸಿಕೆ ತೆಗೆದುಕೊಳ್ಳಬೇಕು ಎಂದು ಅಮೆರಿಕದ ನಾಗರಿಕರನ್ನು ಸೆನೆಟ್‌ನ ರಿಪಬ್ಲಿಕನ್‌ ಪಕ್ಷದ ಸದಸ್ಯ ಮಿಟ್ಚ್‌ ಮ್ಯಾಕ್‌ಕೊನೆಲ್‌ ಒತ್ತಾಯಿಸಿದ್ದಾರೆ.

‘ಕೊರೊನಾ ಸೋಂಕಿನಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳದಿದ್ದರೆ, ಕಳೆದ ವರ್ಷದಂತೆ ಸೋಂಕಿನ ಪ್ರಮಾಣ ಹೆಚ್ಚಾಗಿ ಮತ್ತೆ ಲಾಕ್‌ಡೌನ್‌ನಂತಹ ನಿರ್ಬಂಧಗಳು ಪುನರಾವರ್ತನೆಯಾಗುವ ಸಾಧ್ಯತೆ ಇದೆ‘ ಎಂದು ಅವರು ಎಚ್ಚರಿಸಿದ್ದಾರೆ.

ಕೋವಿಡ್‌ ಲಸಿಕೆಗಳ ಕುರಿತು ಬರುತ್ತಿರುವ ಸುಳ್ಳು ಸುದ್ದಿಗಳನ್ನು, ಅನುಪಯುಕ್ತ ಸಲಹೆಗಳನ್ನು ನಿರ್ಲಕ್ಷ್ಯಿಸುವಂತೆ ಒತ್ತಾಯಿಸಿದ ಅವರು, ಲಸಿಕೆ ಪಡೆಯದೇ, ಹೊಸ ಕೊರೊನಾ ವೈರಸ್‌ ಸೋಂಕಿಗೆ ತುತ್ತಾಗಿರುವವರಲ್ಲಿ ಬಹುತೇಕರು ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ ಎಂದು ಹೇಳಿದ್ದಾರೆ.

ADVERTISEMENT

ವಾರದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಮ್ಯಾಕ್‌ಕೊನಾಲ್‌, ‘ಯಾರಾದರೂ ಲಸಿಕೆ ಹಾಕಿಸಿಕೊಳ್ಳದಿದ್ದರೆ, ಅಂತಹವರು ತಕ್ಷಣವೇ ಲಸಿಕೆ ಹಾಕಿಸಿಕೊಳ್ಳಿ. ಸಾಧ್ಯವಾದಷ್ಟು ವೇಗವಾಗಿ ಲಸಿಕೆ ಪ್ರಕ್ರಿಯೆ ಪೂರ್ಣಗೊಳ್ಳಬೇಕು. ಇಲ್ಲದಿದ್ದರೆ, ಕಳೆದ ವರ್ಷ ಅನುಭವಿಸಿದ ಸಮಸ್ಯೆಯೇ ಪುನರಾವರ್ತನೆಯಾಗುತ್ತದೆ‘ ಎಂದು ಅವರು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.