ADVERTISEMENT

ಎಂಎಚ್‌17 ವಿಮಾನ ಪತನ: ತನಿಖೆ ಸ್ಥಗಿತಕ್ಕೆ ನಿರ್ಧಾರ

ಏಜೆನ್ಸೀಸ್
Published 8 ಫೆಬ್ರುವರಿ 2023, 13:02 IST
Last Updated 8 ಫೆಬ್ರುವರಿ 2023, 13:02 IST
-
-   

ದಿ ಹೇಗ್: ಉಕ್ರೇನ್‌ನಲ್ಲಿ ಕ್ಷಿಪಣಿ ದಾಳಿಯಿಂದಾಗಿ ಮಲೇಷ್ಯಾ ಏರ್‌ಲೈನ್ಸ್‌ನ ಎಂಎಚ್‌17 ವಿಮಾನ ಪತನಗೊಂಡಿದ್ದ ಘಟನೆ ಕುರಿತ ತನಿಖೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಂತರರಾಷ್ಟ್ರೀಯ ತನಿಖಾಧಿಕಾರಿಗಳ ತಂಡ ಬುಧವಾರ ಹೇಳಿದೆ.

‘ಈ ಪ್ರಕರಣದಲ್ಲಿ ಶಂಕಿತರ ವಿರುದ್ಧ ಕಾನೂನುಕ್ರಮ ಕೈಗೊಳ್ಳಲು ಅಗತ್ಯದಷ್ಟು ಸಾಕ್ಷ್ಯಗಳು ಲಭ್ಯವಾಗದ ಕಾರಣ ತನಿಖೆಯನ್ನು ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ’ ಎಂದು ತಂಡ ತಿಳಿಸಿದೆ.

2014ರಲ್ಲಿ, ಆಮ್‌ಸ್ಟರ್‌ಡ್ಯಾಮ್‌ನಿಂದ ಕ್ವಾಲಾಲಂಪುರಕ್ಕೆ ಹೊರಟಿದ್ದ ಎಂಎಚ್‌ 17 ವಿಮಾನವನ್ನು ಹೊಡೆದುರುಳಿಸಲಾಗಿತ್ತು. ವಿಮಾನದಲ್ಲಿದ್ದ ಎಲ್ಲಾ 298 ಜನರು ಸಾವನ್ನಪ್ಪಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.