ADVERTISEMENT

ಸ್ಕಾಟ್ಲೆಂಡ್ ನದಿಯಲ್ಲಿ ಕೇರಳ ಮೂಲದ ಭಾರತೀಯ ವಿದ್ಯಾರ್ಥಿನಿಯ ಶವ ಪತ್ತೆ

ಪಿಟಿಐ
Published 30 ಡಿಸೆಂಬರ್ 2024, 10:22 IST
Last Updated 30 ಡಿಸೆಂಬರ್ 2024, 10:22 IST
<div class="paragraphs"><p>ಸಂತ್ರಾ ಸಾಜು</p></div>

ಸಂತ್ರಾ ಸಾಜು

   

ಲಂಡನ್: ಡಿಸೆಂಬರ್ ಆರಂಭದಲ್ಲಿ ನಾಪತ್ತೆಯಾಗಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿನಿಯ ಶವ ಸ್ಕಾಟ್ಲೆಂಡಿನ ನದಿಯೊಂದರಲ್ಲಿ ಪತ್ತೆಯಾಗಿದೆ.

ಕೇರಳ ಮೂಲದ ಸಂತ್ರಾ ಸಾಜು ಅವರು ಸ್ಕಾಟಿಷ್‌ನ ಎಡಿನ್‌ಬರ್ಗ್‌ನಲ್ಲಿರುವ ಹೆರಿಯಟ್-ವ್ಯಾಟ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಡಿಸೆಂಬರ್ 6ರ ಸಂಜೆ ಲಿವಿಂಗ್‌ಸ್ಟನ್‌ನ ಆಲ್ಮಂಡ್‌ವೇಲ್‌ನಲ್ಲಿರುವ ಅಸ್ಡಾ ಸೂಪರ್‌ಮಾರ್ಕೆಟ್‌ನಲ್ಲಿ ಕೊನೆಯದಾಗಿ ಸಂತ್ರಾ ಕಾಣಿಸಿಕೊಂಡಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ADVERTISEMENT

‘ಡಿಸೆಂಬರ್ 27ರ ಬೆಳಿಗ್ಗೆ 11.55ರ ವೇಳೆ ಎಡಿನ್‌ಬರ್ಗ್‌ನ ನ್ಯೂಬ್ರಿಡ್ಜ್ ಬಳಿ ನದಿಯಲ್ಲಿ ಯುವತಿಯೊಬ್ಬಳ ಶವ ಪತ್ತೆಯಾಗಿದ್ದು, ನಾಪತ್ತೆಯಾಗಿರುವ ಸಂತ್ರಾ ಅವರ ಮೃತದೇಹವೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಮೃತದೇಹದ ಗುರುತು ಖಚಿತಪಡಿಸಿಕೊಳ್ಳಲು ಸಂತ್ರಾ ಅವರ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ’ ಎಂದು ಸ್ಕಾಟ್ಲೆಂಡ್ ಪೊಲೀಸರು ತಿಳಿಸಿದ್ದಾರೆ.

ಯುವತಿಯ ಸಾವಿಗೆ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.