ADVERTISEMENT

ಇಸ್ರೇಲ್‌ಗೆ ಬಂದಿಳಿದ ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಫೆಬ್ರುವರಿ 2026, 14:55 IST
Last Updated 25 ಫೆಬ್ರುವರಿ 2026, 14:55 IST
   

ಜೆರುಸಲೆಂ: ಇಸ್ರೇಲ್‌ಗೆ ಬಂದಿಳಿದ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅವರ ಪತ್ನಿ ಸಾರಾ ಆತ್ಮೀಯವಾಗಿ ಬರಮಾಡಿಕೊಂಡರು.

ಬುಧವಾರ ಟೆಲ್‌ ಅವೀವ್‌ನ ಬೆನ್‌ ಗುರಿಯನ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅವರು ಬಂದಿಳಿದರು. ವಿಮಾನ ನಿಲ್ದಾಣದಲ್ಲಿ ಅವರಿಗೆ ಔಪಚಾರಿಕ ಸ್ವಾಗತ ನೀಡಲಾಯಿತು.

‘ಎರಡನೇ ಬಾರಿಗೆ ಇಸ್ರೇಲ್‌ಗೆ ಭೇಟಿ ನೀಡಿರುವ ನನ್ನ ಆತ್ಮೀಯ ಸ್ನೇಹಿತ ನರೇಂದ್ರ ಮೋದಿ ಅವರನ್ನು ನಾನು ಮತ್ತು ನನ್ನ ಪತ್ನಿ ಸಾರಾ ಆತ್ಮೀಯವಾಗಿ ಬರಮಾಡಿಕೊಂಡೆವು’ ಎಂದು ನೆತನ್ಯಾಹು ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ADVERTISEMENT

2017ರಲ್ಲಿ ಮೊದಲ ಬಾರಿಗೆ ಇಸ್ರೇಲ್‌ಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ, 9 ವರ್ಷಗಳ ಬಳಿಕ ಎರಡನೇ ಬಾರಿಗೆ ಇದೀಗ ಭೇಟಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.