ADVERTISEMENT

MEGA ಪಾಲುದಾರಿಕೆಗಾಗಿ MAGA, MIGA ಒಂದಾಗಿವೆ: ಪ್ರಧಾನಿ ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಫೆಬ್ರುವರಿ 2025, 4:38 IST
Last Updated 14 ಫೆಬ್ರುವರಿ 2025, 4:38 IST
<div class="paragraphs"><p>ಡೊನಾಲ್ಡ್ ಟ್ರಂಪ್, ನರೇಂದ್ರ ಮೋದಿ</p></div>

ಡೊನಾಲ್ಡ್ ಟ್ರಂಪ್, ನರೇಂದ್ರ ಮೋದಿ

   

(ಪಿಟಿಐ ಚಿತ್ರ)

ವಾಷಿಂಗ್ಟನ್: 'MEGA ಪಾಲುದಾರಿಕೆಗಾಗಿ MAGA, MIGA ಒಂದಾಗಿವೆ' - ಅಮೆರಿಕ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ನಡೆಸಿದ ಮಾತುಕತೆಯ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಹೇಳಿದ ಮಾತುಗಳಿವು.

ADVERTISEMENT

ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲೂ ಬರೆದುಕೊಂಡಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಆಗಾಗ್ಗೆ 'ಮೇಕ್ ಅಮೆರಿಕ ಗ್ರೇಟ್ ಎಗೈನ್' (MAGA) ಕುರಿತು ಪ್ರತಿಪಾದಿಸುತ್ತಲೇ ಇರುತ್ತಾರೆ. ಭಾರತದಲ್ಲಿ ನಾವು 'ವಿಕಸಿತ' ಭಾರತದತ್ತ ಮಗ್ನರಾಗಿದ್ದೇವೆ. ನಾವಿದ್ದನ್ನು ಅಮೆರಿಕನ್ ಭಾಷೆಯಲ್ಲಿ ಹೇಳುವುದಾದರೆ 'ಮೇಕ್ ಇಂಡಿಯಾ ಗ್ರೇಟ್ ಎಗೈನ್' (MIGA) ಆಗಿರುತ್ತದೆ ಎಂದು ಪ್ರಧಾನಿ ಮೋದಿ ಉಲ್ಲೇಖಿಸಿದ್ದಾರೆ.

'ನಾವು ಒಟ್ಟಾಗಿ ಭಾರತ-ಅಮೆರಿಕ ಸಮೃದ್ಧಿಗಾಗಿ ಮೆಗಾ (MEGA) ಪಾಲುದಾರಿಕೆಯನ್ನು ಹೊಂದಿದ್ದೇವೆ' ಎಂದು ಅವರು ತಿಳಿಸಿದ್ದಾರೆ.

'MAGA ಹಾಗೂ MIGA ಪಾಲುದಾರಿಗೆಯು ಹೊಸ ಸ್ಫೂರ್ತಿ, ಗುರಿ ಮತ್ತು ವ್ಯಾಪ್ತಿಯನ್ನು ನೀಡುತ್ತದೆ. ಭಾರತದ ಇಂಧನದ ಭದ್ರತೆಯನ್ನು ಕಾಪಾಡಿಕೊಳ್ಳಲು ನಾವು ತೈಲ ಮತ್ತು ಅನಿಲ ವ್ಯಾಪಾರಕ್ಕೆ ಒತ್ತು ನೀಡುತ್ತೇವೆ. ಇಂಧನ ಮೂಲಸೌಕರ್ಯದಲ್ಲೂ ಹೂಡಿಕೆ ಹೆಚ್ಚಾಗಲಿದೆ' ಎಂದು ಅವರು ಹೇಳಿದ್ದಾರೆ.

ಟ್ರಂಪ್ ಅವರ 'ಮೇಕ್ ಅಮೆರಿಕ ಗ್ರೇಟ್ ಎಗೈನ್' ಪ್ರತಿಪಾದನೆಯೂ ನಮಗೂ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 2047ರಲ್ಲಿ ಸ್ವಾತಂತ್ರ್ಯದ ಶತಮಾನೋತ್ಸವ ಆಚರಿಸುವಾಗ ಭಾರತವು ಅಭಿವೃದ್ಧಿ ಹೊಂದಿದ ದೇಶ ರೂಪಿಸುವಲ್ಲಿ ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.