ADVERTISEMENT

ಭಯೋತ್ಪಾದನೆ ವಿರುದ್ಧ ಭಾರತ-ಬ್ರೆಜಿಲ್ ಒಗ್ಗಟ್ಟು; ಹಲವು ಒಪ್ಪಂದಗಳಿಗೆ ಸಹಿ

ಪಿಟಿಐ
Published 9 ಜುಲೈ 2025, 4:39 IST
Last Updated 9 ಜುಲೈ 2025, 4:39 IST
<div class="paragraphs"><p>ನರೇಂದ್ರ ಮೋದಿ,&nbsp;ಲುಯಿಜ್‌ ಇನಾಸಿಯೊ ಲುಲಾ ಡ ಸಿಲ್ವಾ</p></div>

ನರೇಂದ್ರ ಮೋದಿ, ಲುಯಿಜ್‌ ಇನಾಸಿಯೊ ಲುಲಾ ಡ ಸಿಲ್ವಾ

   

(ಚಿತ್ರ ಕೃಪೆ: X@narendramodi)

ಬ್ರೆಸಿಲಿಯಾ: ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಬ್ರೆಜಿಲ್‌ನ ಅಧ್ಯಕ್ಷ ಲುಯಿಜ್‌ ಇನಾಸಿಯೊ ಲುಲಾ ಡ ಸಿಲ್ವಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ADVERTISEMENT

ಅಲ್ಲದೆ ಉಭಯ ದೇಶಗಳ ನಡುವಿನ ಸಹಕಾರಕ್ಕೆ ಸಂಬಂಧಿಸಿದಂತೆ ಹಲವು ಕ್ಷೇತ್ರಗಳಲ್ಲಿ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.

ಈ ಸಂದರ್ಭದಲ್ಲಿ ಭಯೋತ್ಪಾದನೆ ಮತ್ತು ಅದನ್ನು ಪೋಷಿಸುವವರ ವಿರುದ್ಧ ಒಮ್ಮತದ ಹೇಳಿಕೆ ಮೂಡಿಬಂದಿದೆ.

ಪಾಕಿಸ್ತಾನ ಹಾಗೂ ಅದರ ಮಿತ್ರ ರಾಷ್ಟ್ರವಾದ ಚೀನಾವನ್ನು ಹೆಸರು ಉಲ್ಲೇಖಿಸದೆಯೇ ಪ್ರಧಾನಿ ಮೋದಿ, ಭಯೋತ್ಪಾದನೆ ವಿಚಾರದಲ್ಲಿ ಇಬ್ಬಗೆಯ ನೀತಿಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಭಯೋತ್ಪಾದನೆ ವಿರುದ್ಧದ ನಮ್ಮ ಹೋರಾಟವು ಶೂನ್ಯ ಸಹಿಷ್ಣುತೆ ನೀತಿಯನ್ನು ಹೊಂದಿದೆ. ಅಲ್ಲಿ ಇಬ್ಬಗೆಯ ನೀತಿ ಇರಬಾರದು ಎಂದು ಜಂಟಿ ಹೇಳಿಕೆಯಲ್ಲಿ ಪ್ರಧಾನಿ ಮೋದಿ ಉಲ್ಲೇಖಿಸಿದ್ದಾರೆ.

ಭಯೋತ್ಪಾದನೆಯನ್ನು ಭಾರತ ಹಾಗೂ ಬ್ರೆಜಿಲ್ ಬಲವಾಗಿ ವಿರೋಧಿಸುತ್ತದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಭಾರತವನ್ನು ಬೆಂಬಲಿಸಿದ ಬ್ರೆಜಿಲ್ ಅಧ್ಯಕ್ಷರಿಗೆ ಪ್ರಧಾನಿ ಕೃತಜ್ಞತೆ ಸಲ್ಲಿಸಿದ್ದಾರೆ.

ವ್ಯಾಪಾರ, ಹೂಡಿಕೆ, ರಕ್ಷಣಾ ವಲಯ, ಭದ್ರತೆ, ಆರೋಗ್ಯ, ಔಷಧ, ಬಾಹ್ಯಾಕಾಶ, ಇಂಧನ, ಆಹಾರ, ಮೂಲಸೌಕರ್ಯ ಅಭಿವೃದ್ಧಿ, ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ, ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳ ಕುರಿತು ಉಭಯ ನಾಯಕರು ಚರ್ಚೆ ನಡೆಸಿದ್ದಾರೆ.

ಖನಿಜ, ನಾವೀನ್ಯ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ, ಸೂಪರ್ ಕಂಪ್ಯೂಟರ್, ಡಿಜಿಟಲ್ ಸಹಯೋಗದ ಕುರಿತಾಗಿಯೂ ವಿಶ್ಲೇಷಣೆ ನಡೆಸಿದ್ದಾರೆ.

ಮುಂದಿನ ಐದು ವರ್ಷಗಳಲ್ಲಿ 20 ಶತಕೋಟಿ ಅಮೆರಿಕನ್ ಡಾಲರ್ ದ್ವಿಪಕ್ಷೀಯ ವ್ಯಾಪಾರ ಗುರಿಯನ್ನು ನಿಗದಿಪಡಿಸಲಾಗಿದೆ.

ರಕ್ಷಣಾ ವಲಯದಲ್ಲಿ ಭಾರತ ಹಾಗೂ ಬ್ರೆಜಿಲ್ ನಡುವಣ ಸಹಕಾರ ವೃದ್ಧಿಯು ಉಭಯ ದೇಶಗಳ ನಡುವಣ ಪರಸ್ಪರ ನಂಬಿಕೆಯ ಸಂಕೇತವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.