ADVERTISEMENT

ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌ ಜತೆ ಮೋದಿ ಮಾತುಕತೆ

ಪಿಟಿಐ
Published 6 ಸೆಪ್ಟೆಂಬರ್ 2025, 14:43 IST
Last Updated 6 ಸೆಪ್ಟೆಂಬರ್ 2025, 14:43 IST
ಮೋದಿ ಮತ್ತು ಮ್ಯಾಕ್ರನ್‌ (ಸಾಂದರ್ಭಿಕ ಚಿತ್ರ)
ಮೋದಿ ಮತ್ತು ಮ್ಯಾಕ್ರನ್‌ (ಸಾಂದರ್ಭಿಕ ಚಿತ್ರ)   

ನವದೆಹಲಿ: ಫ್ರಾನ್ಸ್‌ ಅಧ್ಯಕ್ಷ  ಎಮಾನ್ಯುಯೆಲ್ ಮ್ಯಾಕ್ರನ್‌ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಉಕ್ರೇನ್‌ ಸಂಘರ್ಷ, ಭಾರತ–ಫ್ರಾನ್ಸ್‌ ನಡುವಿನ ದ್ವಿಪಕ್ಷೀಯ ಸಂಬಂಧ ವೃದ್ಧಿ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಸಿರುವುದಾಗಿ ಹೇಳಿದ್ದಾರೆ.

ರಷ್ಯಾ–ಉಕ್ರೇನ್‌ ನಡುವಿನ ಯುದ್ಧವನ್ನು ಕೊನೆಗೊಳಿಸಲು ಅಮೆರಿಕವು ಹೊಸ ಪ್ರಯತ್ನಗಳನ್ನು ಮಾಡುತ್ತಿರುವಂತೆಯೇ ಮೋದಿ ಮತ್ತು ಮ್ಯಾಕ್ರನ್‌ ಈ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

‘ಉಕ್ರೇನ್‌ ಸಂಘರ್ಷವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಸೇರಿದಂತೆ ಜಾಗತಿಕ ಹಾಗೂ ಪ್ರಾದೇಶಿಕ ವಿಚಾರಗಳಿಗೆ ಸಂಬಂಧಿಸಿದಂತೆ ಮ್ಯಾಕ್ರನ್‌ ಅವರೊಂದಿಗೆ ಮಾತುಕತೆ ನಡೆಸಿದೆ. ವಿವಿಧ ಕ್ಷೇತ್ರಗಳಲ್ಲಿ ಭಾರತ ಮತ್ತು ಫ್ರಾನ್ಸ್ ನಡುವಿನ ದ್ವಿಪಕ್ಷೀಯ ಸಹಕಾರ ವೃದ್ಧಿ ಕುರಿತಂತೆಯೂ ಧನಾತ್ಮಕ ವಿಶ್ಲೇಷಣೆ ನಡೆಸಲಾಯಿತು’ ಎಂದು ಮೋದಿ ತಿಳಿಸಿದ್ದಾರೆ. 

ADVERTISEMENT

ಅಲ್ಲದೇ, ಭಾರತ ಮತ್ತು ಫ್ರಾನ್ಸ್‌ ನಡುವಿನ ಕಾರ್ಯತಂತ್ರ ಪಾಲುದಾರಿಕೆಯು ಜಾಗತಿಕ ಶಾಂತಿ ಮತ್ತು ಸ್ಥಿರತೆಯನ್ನು ಖಾತರಿಪಡಿಸುವಲ್ಲಿ ಮಹತ್ತರ ಪಾತ್ರ ವಹಿಸಲಿದೆ ಎಂದೂ ಮೋದಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.