ಲಂಡನ್: ಬ್ರಿಟನ್‌ನಲ್ಲಿ ಖಾಲಿಸ್ತಾನ ಪರ ಚಟುವಟಿಕೆಗಳು ಹೆಚ್ಚುತ್ತಿರುವ ಕುರಿತು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕಳವಳ ವ್ಯಕ್ತಪಡಿಸಿದರು.
ಪ್ರಧಾನಿ ಕಿಯರ್ ಸ್ಟಾರ್ಮರ್ ಅವರೊಂದಿಗೆ ಮಾತುಕತೆ ನಡೆಸಿದ ವೇಳೆ ಮೋದಿ ಈ ಮಾತು ಹೇಳಿದ್ದಾರೆ.
‘ಪ್ರಜಾಸತ್ತಾತ್ಮಕವಾಗಿ ದೊರಕಿರುವ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳುವುದಕ್ಕೆ ಉಗ್ರವಾದ ಸಿದ್ಧಾಂತಗಳನ್ನು ಅನುಸರಿಸುವ ಶಕ್ತಿಗಳಿಗೆ ಅವಕಾಶ ನೀಡಬಾರದು’ ಎಂದೂ ಮೋದಿ ಪ್ರತಿಪಾದಿಸಿದರು.
‘ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ದ್ವಂದ್ವ ನಿಲುವುಗಳಿಗೆ ಅವಕಾಶ ಇರಕೂಡದು ಎಂಬುದು ಭಾರತ ಮತ್ತು ಬ್ರಿಟನ್‌ನ ಒಟ್ಟಾಭಿಪ್ರಾಯವಾಗಿದೆ’ ಎಂದು ಹೇಳಿದ ಮೋದಿ, ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ಬಲವಾಗಿ ಖಂಡಿಸಿದ್ದಕ್ಕಾಗಿ ಬ್ರಿಟನ್ ಸರ್ಕಾರಕ್ಕೆ ಧನ್ಯವಾದ ತಿಳಿಸುವುದಾಗಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.