ADVERTISEMENT

ಗಾಜಾದಲ್ಲಿ ಸಂಘರ್ಷ ಕೊನೆಗೊಳಿಸುವ ಟ್ರಂಪ್ ಯೋಜನೆ ಸ್ವಾಗತಿಸಿದ ಪ್ರಧಾನಿ ಮೋದಿ

ಪಿಟಿಐ
Published 30 ಸೆಪ್ಟೆಂಬರ್ 2025, 4:28 IST
Last Updated 30 ಸೆಪ್ಟೆಂಬರ್ 2025, 4:28 IST
<div class="paragraphs"><p>ನರೇಂದ್ರ ಮೋದಿ, ಡೊನಾಲ್ಡ್ ಟ್ರಂಪ್</p></div>

ನರೇಂದ್ರ ಮೋದಿ, ಡೊನಾಲ್ಡ್ ಟ್ರಂಪ್

   

(ಪಿಟಿಐ ಸಂಗ್ರಹ ಚಿತ್ರ)

ನವದೆಹಲಿ: ಗಾಜಾದಲ್ಲಿ ಸಂಘರ್ಷವನ್ನು ಕೊನೆಗೊಳಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯೋಜನೆಯನ್ನು ಭಾರತ ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ.

ADVERTISEMENT

ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, 'ಇದು ಪ್ಯಾಲೆಸ್ಟೀನ್, ಇಸ್ರೇಲ್ ಜನರಿಗೆ ಮತ್ತು ಪಶ್ಚಿಮ ಏಷ್ಯಾದಲ್ಲಿ ದೀರ್ಘಕಾಲ ಶಾಂತಿ, ಭದ್ರತೆ ಹಾಗೂ ಅಭಿವೃದ್ಧಿಗೆ ಬೇಕಾದ ಹಾದಿಯನ್ನು ತೆರೆದುಕೊಳ್ಳುತ್ತದೆ' ಎಂದು ಹೇಳಿದ್ದಾರೆ.

'ಟ್ರಂಪ್ ಅವರ ಈ ಯೋಜನೆಗೆ ಸಂಬಂಧಪಟ್ಟವರೆಲ್ಲರೂ ಒಗ್ಗೂಡಿ ಸಂಘರ್ಷವನ್ನು ನಿಲ್ಲಿಸಿ ಶಾಂತಿಯನ್ನು ನೆಲೆಗೊಳಿಸುವ ಪ್ರಯತ್ನವನ್ನು ಬೆಂಬಲಿಸುತ್ತಾರೆ ಎಂದು ನಂಬಿದ್ದೇನೆ' ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಈ ಮೊದಲು ಶ್ವೇತಭವನದಲ್ಲಿ ಇಸ್ರೇಲ್ ಅಧ್ಯಕ್ಷ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಡೊನಾಲ್ಡ್ ಟ್ರಂಪ್ ಮಾತುಕತೆ ನಡೆಸಿದ್ದರು. ಬಳಿಕ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ್ದರು.

ಗಾಜಾದಲ್ಲಿ ಯುದ್ಧ ಕೊನೆಗಾಣಿಸಲು ಯೋಜನೆ ರೂಪಿಸಲಾಗಿದೆ ಎಂದು ಟ್ರಂಪ್ ಮಾಹಿತಿ ನೀಡಿದ್ದರು. ಇದಕ್ಕೆ ಇಸ್ರೇಲ್ ಸಮ್ಮತಿ ಸೂಚಿಸಿದ್ದರೂ ಈ ಷರತ್ತುಗಳನ್ನು ಹಮಾಸ್ ಒಪ್ಪಿಕೊಳ್ಳುತ್ತದೆಯೇ ಎಂಬುದು ತಿಳಿದು ಬಂದಿಲ್ಲ.

ಇಸ್ರೇಲ್-ಹಮಾಸ್ ಯುದ್ಧವನ್ನು ಕೊನೆಗೊಳಿಸಲು ಯುದ್ಧಪೀಡಿತ ಪ್ಯಾಲೆಸ್ಟೀನ್ ಪ್ರದೇಶದಲ್ಲಿ ತಾತ್ಕಾಲಿಕ ಆಡಳಿತ ರಚನೆಗೆ ಟ್ರಂಪ್ 20 ಅಂಶಗಳ ಯೋಜನೆ ರೂಪಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.