ADVERTISEMENT

ಮೊಹಮ್ಮದ್ ಮುಯಿಝು ಮಾಲ್ಡೀವ್ಸ್‌ನ ನೂತನ ಅಧ್ಯಕ್ಷ: ಪ್ರಧಾನಿ ಮೋದಿ ಅಭಿನಂದನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಅಕ್ಟೋಬರ್ 2023, 5:38 IST
Last Updated 1 ಅಕ್ಟೋಬರ್ 2023, 5:38 IST
<div class="paragraphs"><p>ಮೊಹಮ್ಮದ್ ಮುಯಿಝು- ರಾಯಿಟರ್ಸ್‌ ಚಿತ್ರ</p></div>

ಮೊಹಮ್ಮದ್ ಮುಯಿಝು- ರಾಯಿಟರ್ಸ್‌ ಚಿತ್ರ

   

ಮಾಲ್ಡೀವ್ಸ್‌: ಪ್ರೋಗ್ರೆಸ್ಸಿವ್‌ ಪಾರ್ಟಿ ಆಫ್‌ ಮಾಲ್ಡೀವ್ಸ್‌ (ಪಿಪಿಎಂ) ಪಕ್ಷದ ಅಭ್ಯರ್ಥಿ ಮೊಹಮ್ಮದ್ ಮುಯಿಝು ಮಾಲ್ಡೀವ್ಸ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಶನಿವಾರ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಇಬ್ರಾಹಿಂ ಸೋಲಿಹ್ ಅವರ ವಿರುದ್ಧ ಶೇ 53ರಷ್ಟು ಮತ ಪಡೆದು ಚೀನಾದ ಬಗ್ಗೆ ಒಲವು ಹೊಂದಿರುವ ಮುಯಿಝು ಅವರು ಗೆಲುವು ಸಾಧಿಸಿದ್ದಾರೆ.

ADVERTISEMENT

ಚುನಾವಣೆಯಲ್ಲಿ ಗೆಲವು ಸಾಧಿಸಿದ ಬಳಿಕ ಮುಯಿಝು ಅವರು, ಭ್ರಷ್ಟಾಚಾರದಲ್ಲಿ 11 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಅಧ್ಯಕ್ಷ ಅಬ್ದುಲ್ಲಾ ಯಮೀನ್ ಅವರನ್ನು ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಆದೇಶಿಸಿದ್ದಾರೆ.

ಮುಯಿಝು ಅವರು ಅಧ್ಯಕ್ಷರಾಗಿರುವುದಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ‘ಭಾರತ-ಮಾಲ್ಡೀವ್ಸ್ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸಲು ಮತ್ತು ಹಿಂದೂ ಮಹಾಸಾಗರ ಪ್ರದೇಶದಲ್ಲಿ ಒಟ್ಟಾರೆ ಸಹಕಾರವನ್ನು ಹೆಚ್ಚಿಸಲು ಭಾರತವು ಬದ್ಧವಾಗಿದೆ’ ಎಂದು ಟ್ವೀಟ್‌ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.