ADVERTISEMENT

ಯುರೋಪ್‌ನಲ್ಲಿ ಮಂಕಿಪಾಕ್ಸ್‌ ಸೋಂಕು ಏರಿಕೆ: ಡಬ್ಲ್ಯುಎಚ್‌ಒ ಆತಂಕ

ಎರಡು ವಾರಗಳಲ್ಲಿ ಮೂರು ಪಟ್ಟುಏರಿಕೆ

ಏಜೆನ್ಸೀಸ್
Published 2 ಜುಲೈ 2022, 15:14 IST
Last Updated 2 ಜುಲೈ 2022, 15:14 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಲಂಡನ್‌: ಯುರೋಪ್‌ನಲ್ಲಿ ಕಳೆದ ಎರಡು ವಾರಗಳಲ್ಲಿ ಮಂಕಿಪಾಕ್ಸ್‌ ಪ್ರಕರಣಗಳ ಸಂಖ್ಯೆ ಮೂರು ಪಟ್ಟುಏರಿಕೆಯಾಗಿದೆ. ಹೀಗಾಗಿ ಈ ಭಾಗದ ದೇಶಗಳು ಕೂಡಲೇ ಸೋಂಕು ನಿಗ್ರಹಕ್ಕೆ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಯುರೋಪ್‌ ಮುಖ್ಯಸ್ಥಡಾ.ಹನ್ಸ್‌ ಕ್ಲುಗ್ ಅವರು ಶುಕ್ರವಾರ ಎಚ್ಚರಿಸಿದ್ದಾರೆ.

‘ಏರುಗತಿಯಲ್ಲಿರುವ ಮಂಕಿಪಾಕ್ಸ್ ನಿಯಂತ್ರಣಕ್ಕೆ ಸರ್ಕಾರ ಮತ್ತು ನಾಗರಿಕ ಸಮಾಜ ಸಂಘಟಿತವಾಗಿ ತುರ್ತಾಗಿ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದ್ದಾರೆ.

ಜಗತ್ತಿನಾದ್ಯಂತ 51 ದೇಶಗಳಲ್ಲಿ 5000ಕ್ಕೂ ಹೆಚ್ಚು ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ಶೇ 90ರಷ್ಟು ಪ್ರಕರಣಗಳು ಯುರೋಪ್‌ನ 31 ದೇಶಗಳಲ್ಲಿ ಪತ್ತೆಯಾಗಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.