ರೋಮ್: ಇಟಲಿಯಲ್ಲಿ ಕೋವಿಡ್–19ಕ್ಕೆ ಬಲಿಯಾದವರ ಸಂಖ್ಯೆ ಗುರುವಾರ 3,405ಕ್ಕೆ ಏರಿಕೆಯಾಗಿದ್ದು, ಮೃತರ ಸಂಖ್ಯೆ ಚೀನಾಕ್ಕಿಂತಲೂ ಹೆಚ್ಚಾಗಿದೆ.
ಗುರುವಾರ 427 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚೀನಾದಲ್ಲಿ ಒಟ್ಟು 3,249 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ ಎಂದು ಅಧಿಕೃತ ಮೂಲಗಳು ಹೇಳಿವೆ.
ಈ ಮಧ್ಯೆ,ಸೋಂಕು ದೃಢಪಟ್ಟಿದ್ದ ಭಾರತೀಯ ಪ್ರಜೆಯೊಬ್ಬರು ಇರಾನ್‌ನಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.