ಮೌಂಟ್ ಎವರೆಸ್ಟ್ (ಸಾಂದರ್ಭಿಕ ಚಿತ್ರ)
ಪಿಟಿಐ ಚಿತ್ರ
ಬೀಜಿಂಗ್: ಜಗತ್ತಿನ ಅತಿ ಎತ್ತರದ ಪರ್ವತ ಮೌಂಟ್ ಎವರೆಸ್ಟ್‌ನಲ್ಲಿ ತೀವ್ರ ಹಿಮಪಾತವಾದ ಕಾರಣ ಟಿಬೆಟಿಯನ್ ಇಳಿಜಾರಿನ ಶಿಬಿರಗಳಲ್ಲಿ ಸುಮಾರು ಒಂದು ಸಾವಿರ ಪರ್ವತಾರೋಹಿಗಳು ಸಿಲುಕಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪರ್ವತ ಪ್ರದೇಶವನ್ನು ತಲುಪುವ ಹಾದಿಯೂ ಹಿಮದಿಂದ ಮುಚ್ಚಿದ್ದು, ತೆರವಿಗೆ ನೂರಾರು ಸ್ಥಳೀಯರು ಮತ್ತು ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ.
ಈಗಾಗಲೇ ಹಲವು ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ ಎಂದು ಸ್ಥಳೀಯ ಮಾಧ್ಯಮದ ವರದಿ ಉಲ್ಲೇಖಿಸಿ ಬಿಬಿಸಿ ವರದಿ ತಿಳಿಸಿದೆ.
ಪರ್ವತಾರೋಹಿಗಳ ನೆಚ್ಚಿನ ಪ್ರದೇಶವಾದ ಟಿಬೆಟ್‌ನ ಮೌಂಟ್ ಎವರೆಸ್ಟ್‌ನ ಪೂರ್ವ ಇಳಿಜಾರುಗಳಲ್ಲಿ ಶುಕ್ರವಾರ ಸಂಜೆಯಿಂದ ಭಾರಿ ಹಿಮಪಾತ ಪ್ರಾರಂಭವಾಗಿದೆ.
ಹವಾಮಾನ ವೈಪರೀತ್ಯದ ಹಿನ್ನೆಲೆ ಎವರೆಸ್ಟ್ ಪರ್ವತಾರೋಹಣಕ್ಕೆ ಟಿಕೆಟ್ ಕಾಯ್ದಿರಿಸುವಿಕೆಯನ್ನೂ ಸ್ಥಗಿತಗೊಳಿಸಲಾಗಿದೆ.
ನೆರೆಯ ನೇಪಾಳದಲ್ಲೂ ಭಾರಿ ಮಳೆ ಸುರಿಯುತ್ತಿದ್ದು, ಈಗಾಗಲೇ 52 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.