ADVERTISEMENT

ಅಫ್ಗನ್ ನೂತನ ಸರ್ಕಾರಕ್ಕೆ ಮುಲ್ಲಾ ಮೊಹಮ್ಮದ್ ಹಸನ್ ಅಖುಂದ್ ನಾಯಕ: ತಾಲಿಬಾನ್

ಏಜೆನ್ಸೀಸ್
Published 7 ಸೆಪ್ಟೆಂಬರ್ 2021, 15:54 IST
Last Updated 7 ಸೆಪ್ಟೆಂಬರ್ 2021, 15:54 IST
ಮುಲ್ಲಾ ಮೊಹಮ್ಮದ್ ಹಸನ್ ಅಖುಂದ್ - ಎಎಫ್‌ಪಿ ಚಿತ್ರ
ಮುಲ್ಲಾ ಮೊಹಮ್ಮದ್ ಹಸನ್ ಅಖುಂದ್ - ಎಎಫ್‌ಪಿ ಚಿತ್ರ   

ಕಾಬೂಲ್: ಅಫ್ಗಾನಿಸ್ತಾನದ ನೂತನ ಸರ್ಕಾರಕ್ಕೆ ಮುಲ್ಲಾ ಮೊಹಮ್ಮದ್ ಹಸನ್ ಅಖುಂದ್ ಅವರು ನಾಯಕರಾಗಿರಲಿದ್ದಾರೆ ಎಂದು ತಾಲಿಬಾನ್ ಮಂಗಳವಾರ ಘೋಷಿಸಿದೆ.

ಕಾಬೂಲ್‌ನಸರ್ಕಾರಿ ಮಾಹಿತಿ ಮತ್ತು ಮಾಧ್ಯಮ ಕೇಂದ್ರದಲ್ಲಿ ಪತ್ರಿಕಾಗೋಷ್ಠಿ ನಡೆಸಿದತಾಲಿಬಾನ್ ಮುಖ್ಯ ವಕ್ತಾರ ಜಬಿಯುಲ್ಲಾ ಮುಜಾಹಿದ್, ‘ತಾಲಿಬಾನ್ ಸಹ ಸಂಸ್ಥಾಪಕ ಅಬ್ದುಲ್ ಘನಿ ಬರದರ್ ಸರ್ಕಾರದ ಉಪ ನಾಯಕನಾಗಿರಲಿದ್ದಾರೆ’ ಎಂದು ತಿಳಿಸಿದ್ದಾರೆ.

ತಾಲಿಬಾನ್ ಸಂಸ್ಥಾಪಕ ಮುಲ್ಲಾ ಒಮರ್ ಪುತ್ರ ಮುಲ್ಲಾ ಯಾಕುಬ್‌ರನ್ನು ರಕ್ಷಣಾ ಸಚಿವರನ್ನಾಗಿ ಘೋಷಿಸಲಾಗಿದೆ. ಹಖ್ಖಾನಿ ಗುಂಪಿನ ನಾಯಕ ಸಿರಾಜುದ್ದೀನ್ ಹಖ್ಖಾನಿ ಅವರನ್ನು ಆಂತರಿಕ ಸಚಿರನ್ನಾಗಿ ನೇಮಕ ಮಾಡಲಾಗಿದೆ.

‘ಸಚಿವ ಸಂಪುಟ ಇನ್ನೂ ಪೂರ್ಣಗೊಂಡಿಲ್ಲ. ಈಗ ಘೋಷಣೆ ಮಾಡಿರುವುದು ಹಂಗಾಮಿ ಸಂಪುಟವಷ್ಟೆ’ ಎಂದು ಮುಜಾಹಿದ್ ತಿಳಿಸಿದ್ದಾರೆ.

ದೇಶದ ಇತರ ಪ್ರದೇಶಗಳ ಜನರನ್ನೂ ಒಳಗೊಂಡಿರುವ ಸಂಪುಟ ರಚಿಸಲು ಪ್ರಯತ್ನಿಸಲಿದ್ದೇವೆ ಎಂದೂ ಅವರು ಹೇಳಿದ್ದಾರೆ.

ಪೂರ್ವನಿಗದಿಯಂತೆ ಸೆಪ್ಟೆಂಬರ್ 4ರಂದೇ ಅಫ್ಗಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ರಚನೆಯಾಗಬೇಕಿತ್ತು. ಆದರೆ ಹೊಸ ಸರ್ಕಾರ ರಚನೆ ಪ್ರಕ್ರಿಯೆಯನ್ನು ಮುಂದಿನ ವಾರಕ್ಕೆ ಮುಂದೂಡಲಾಗಿದೆ ಎಂದು ತಾಲಿಬಾನ್ ವಕ್ತಾರ ಜಬಿಯುಲ್ಲಾ ಮುಜಾಹಿದ್ ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.