ಕಠ್ಮಂಡು: ಹಿರಿಯ ಸಂಸದ ನಾರಾಯಣ್ ಖಡ್ಕಾ ಅವರನ್ನು ನೇಪಾಳದ ನೂತನ ವಿದೇಶಾಂಗ ಸಚಿವರನ್ನಾಗಿ ನೇಮಕ ಮಾಡಲಾಗಿದೆ.
ಪ್ರಧಾನಿ ಶೇರ್ ಬಹಾದ್ದೂರ್ ದೇವುಬಾ ನೇತೃತ್ವದ ಸರ್ಕಾರ ಮಾಡಿದ ಶಿಫಾರಸಿನಂತೆ, ಅಧ್ಯಕ್ಷೆ ವಿದ್ಯಾದೇವಿ ಭಂಡಾರಿ ಅವರು ಖಡ್ಕಾ ಅವರನ್ನು ನೇಮಕ ಮಾಡಿದ್ದಾರೆ. ಈ ವರೆಗೆ ವಿದೇಶಾಂಗ ಖಾತೆ ಪ್ರಧಾನಿ ಬಳಿಯೇ ಇತ್ತು.
ಖಡ್ಕಾ ಅವರು ಪುಣೆ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಪಿಎಚ್.ಡಿ ಪಡೆದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.