ನರೇಂದ್ರ ಮೋದಿ, ಲುಲಾ ಡ ಸಿಲ್ವಾ
ಬ್ರೆಸಿಲಿಯಾ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬ್ರೆಜಿಲ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಗ್ರ್ಯಾಂಡ್ ಕಾಲರ್ ಆಫ್ ದಿ ನ್ಯಾಷನಲ್ ಆರ್ಡರ್ ಆಫ್ ದಿ ಸದರ್ನ್ ಕ್ರಾಸ್' ಅನ್ನು ನೀಡಿ ಗೌರವಿಸಲಾಯಿತು.
ಬ್ರೆಸಿಲಿಯಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ರೆಜಿಲ್ ಅಧ್ಯಕ್ಷ ಲುಲಾ ಡ ಸಿಲ್ವಾ ಅವರು ಪ್ರಧಾನಿ ಮೋದಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದ್ದಾರೆ.
ದ್ವಿಪಕ್ಷೀಯ ಬಾಂಧವ್ಯ ಗಟ್ಟಿಗೊಳಿಸುವುದು ಮತ್ತು ಜಾಗತಿಕ ವೇದಿಕೆಗಳಲ್ಲಿ ಭಾರತ-ಬ್ರೆಜಿಲ್ ಸಹಕಾರವನ್ನು ಹೆಚ್ಚಿಸಲು ಪ್ರಧಾನಿ ಮೋದಿ ಅವರ ಕೊಡುಗೆಗಳನ್ನು ಗುರುತಿಸಿ ಅವರನ್ನು ಗೌರವಿಸಲಾಯಿತು.
'ಬ್ರೆಜಿಲ್‌ನ ಅಧ್ಯಕ್ಷರು ದೇಶದ ಅತ್ಯನ್ನತ್ತ ಪ್ರಶಸ್ತಿ ನೀಡಿ ಗೌರವಿಸಿರುವುದು ನನಗೆ ಮಾತ್ರವಲ್ಲ, 140 ಕೋಟಿ ಭಾರತೀಯರಿಗೂ ಸಂದ ಗೌರವ ಹಾಗೂ ಹೆಮ್ಮೆಯ ಕ್ಷಣವಾಗಿದೆ' ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ.
'ಈ ಸಂದರ್ಭದಲ್ಲಿ ಬ್ರೆಜಿಲ್ ಅಧ್ಯಕ್ಷರು, ಬ್ರೆಜಿಲ್ ಸರ್ಕಾರ ಹಾಗೂ ಅಲ್ಲಿನ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಉಭಯ ದೇಶಗಳ ನಡುವಿನ ಬಾಂಧವ್ಯ ಮತ್ತಷ್ಟು ಗಟ್ಟಿಗೊಳಿಸಲು ಹಾಗೂ ಎತ್ತರಕ್ಕೆ ಕೊಂಡೊಯ್ಯಲು ಇದರಿಂದ ಪ್ರೇರಣೆಯಾಗಲಿದೆ' ಎಂದು ಅವರು ಹೇಳಿದ್ದಾರೆ.
'ಈ ಪ್ರಶಸ್ತಿಯು ಭಾರತ ಹಾಗೂ ಬ್ರೆಜಿಲ್ ಜನತೆಯ ಸ್ನೇಹ ಬಾಂಧವ್ಯದ ಪ್ರತೀಕವಾಗಿದೆ' ಎಂದು ಅವರು ಉಲ್ಲೇಖಿಸಿದ್ದಾರೆ.
2014ರಲ್ಲಿ ಪ್ರಧಾನಿ ಆದ ಬಳಿಕ ಮೋದಿಗೆ ವಿವಿಧ ದೇಶಗಳಿಂದ ದೊರಕಿದ 26ನೇ ಅಂತರಾಷ್ಟ್ರೀಯ ಪ್ರಶಸ್ತಿ ಇದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.