ADVERTISEMENT

ಬ್ರೆಜಿಲ್ ಪ್ರವಾಸದ ಬಳಿಕ ನಮೀಬಿಯಾಕ್ಕೆ ಪ್ರಧಾನಿ ಮೋದಿ ಭೇಟಿ

ಪಿಟಿಐ
Published 9 ಜುಲೈ 2025, 5:03 IST
Last Updated 9 ಜುಲೈ 2025, 5:03 IST
<div class="paragraphs"><p>ನರೇಂದ್ರ ಮೋದಿ</p></div>

ನರೇಂದ್ರ ಮೋದಿ

   

(ಚಿತ್ರ ಕೃಪೆ: X/@PMOIndia)

ವಿಂಡ್‌ಹೋಕ್(ನಮೀಬಿಯಾ): ಬ್ರೆಜಿಲ್ ಭೇಟಿಯ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ನಮೀಬಿಯಾ ಪ್ರವಾಸವನ್ನು ಕೈಗೊಂಡಿದ್ದಾರೆ.

ADVERTISEMENT

ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆದ 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಬಳಿಕ ಬ್ರೆಜಿಲ್ ಅಧ್ಯಕ್ಷ ಲುಯಿಜ್‌ ಇನಾಸಿಯೊ ಲುಲಾ ಡ ಸಿಲ್ವಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು. ಅಲ್ಲದೆ ಹಲವು ಒಪ್ಪಂದಗಳಿಗೆ ಸಹಿ ಹಾಕಿದ್ದರು.

ಈಗ ಎರಡು ದಿನಗಳ ಯಶಸ್ವಿ ಬ್ರೆಜಿಲ್ ಪ್ರವಾಸದ ಬಳಿಕ ನಮೀಬಿಯಾಕ್ಕೆ ತೆರಳಿದ್ದಾರೆ.

ಐದು ದೇಶಗಳ ಪ್ರವಾಸ ಕೈಗೊಂಡಿದ್ದ ಪ್ರಧಾನಿ ಮೋದಿ ಈಗಾಗಲೇ ಬ್ರೆಜಿಲ್ ಸೇರಿದಂತೆ ಘಾನಾ, ಟ್ರಿನಿಡಾಡ್ ಆ್ಯಂಡ್ ಟೊಬಾಗೊ ಮತ್ತು ಅರ್ಜೇಂಟೀನಾಕ್ಕೆ ಭೇಟಿ ನೀಡಿದ್ದಾರೆ.

ಬ್ರೆಜಿಲ್ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬ್ರೆಜಿಲ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಗ್ರ್ಯಾಂಡ್ ಕಾಲರ್ ಆಫ್ ದಿ ನ್ಯಾಷನಲ್ ಆರ್ಡರ್ ಆಫ್ ದಿ ಸದರ್ನ್ ಕ್ರಾಸ್' ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇದಕ್ಕೂ ಮೊದಲು ಘಾನಾ ದೇಶದಲ್ಲಿ 'ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ' ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.