ADVERTISEMENT

ಸಂಸತ್ ವಿಸರ್ಜಿಸಲು ನೇಪಾಳ ಕ್ಯಾಬಿನೆಟ್ ಶಿಫಾರಸು

ರಾಯಿಟರ್ಸ್
Published 20 ಡಿಸೆಂಬರ್ 2020, 6:30 IST
Last Updated 20 ಡಿಸೆಂಬರ್ 2020, 6:30 IST
ನೇಪಾಳ ಪ್ರಧಾನ ಮಂತ್ರಿ ಕೆ.ಪಿ. ಶರ್ಮಾ ಒಲಿ
ನೇಪಾಳ ಪ್ರಧಾನ ಮಂತ್ರಿ ಕೆ.ಪಿ. ಶರ್ಮಾ ಒಲಿ   

ಕಠ್ಮಂಡು (ನೇಪಾಳ): ಭಾನುವಾರ ನಡೆದ ತುರ್ತು ಸಭೆಯಲ್ಲಿ ಸಂಸತ್ ವಿಸರ್ಜಿಸಲು ನೇಪಾಳದ ಕ್ಯಾಬಿನೆಟ್ ಶಿಫಾರಸು ಮಾಡಿದೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಇಂದಿನ (ಭಾನುವಾರ) ತುರ್ತು ಕ್ಯಾಬಿನೆಟ್ ಸಭೆಯಲ್ಲಿ ಸಂಸತ್ತನ್ನು ವಿಸರ್ಜಿಸಲು ರಾಷ್ಟ್ರಪತಿಗೆ ಶಿಫಾರಸು ಮಾಡಲು ನಿರ್ಧರಿಸಿದೆ ಎಂದು ಪ್ರಧಾನಿ ಕೆ.ಪಿ. ಶರ್ಮಾ ಒಲಿ ಅವರ ಸಂಪುಟದಲ್ಲಿ ಇಂಧನ ಸಚಿವರಾಗಿರುವ ಬರ್ಸಮನ್ ಪುನ್ ತಿಳಿಸಿದರು.

ವಿವಾದಾತ್ಮಕ ಆರ್ಡಿನೆನ್ಸ್ ಹಿಂತೆಗೆದುಕೊಳ್ಳುವಂತೆ ಆಡಳಿತರೂಢ ನೇಪಾಳ ಕಮ್ಯೂನಿಸ್ಟ್ ಪಕ್ಷದಲ್ಲಿ (ಎನ್‌ಸಿಪಿ) ತಮ್ಮ ವಿರೋಧಿಗಳ ಒತ್ತಡಕ್ಕೆ ಒಳಗಾಗಿದ್ದ ಪ್ರಧಾನಿ ಕೆ.ಪಿ. ಶರ್ಮಾ ಒಲಿ, ಸಂಸತ್ತನ್ನು ವಿಸರ್ಜಿಸಲು ಶಿಫಾರಸು ಮಾಡಿದರು.

ADVERTISEMENT

ಪ್ರಧಾನಿ ಒಲಿ ಮಂಗಳವಾರ ಹೊರಡಿಸಿದ ಸಾಂವಿಧಾನಿಕ ಮಂಡಳಿ ಕಾಯ್ದೆಯೊಂದಕ್ಕೆ ಸಂಬಂಧಿಸಿದಂತೆ ಸುಗ್ರೀವಾಜ್ಞೆಯನ್ನು ಹಿಂಪಡೆಯುವ ಒತ್ತಡದಲ್ಲಿದ್ದರು. ಇದನ್ನು ಅಧ್ಯಕ್ಷೆ ಬಿದ್ಯಾ ದೇವಿ ಭಂಡಾರಿ ಒಂದು ಗಂಟೆಯೊಳಗೆ ಅಂಗೀಕರಿಸಿದ್ದರು.

ಕೇವಲ ಮೂರು ಸದಸ್ಯರ ಹಾಜರಾತಿಯಲ್ಲಿ ಸಭೆಗಳನ್ನು ಕರೆಯುವ ಹಾಗೂ ನಿರ್ಣಯಗಳನ್ನು ತೆಗೆದುಕೊಳ್ಳುವ ಹಕ್ಕನ್ನು ಈ ಕಾಯ್ದೆಯು ನೀಡುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.