ADVERTISEMENT

Nepal Gen Z Protest: ಸಂಸತ್ ಕಟ್ಟಡಕ್ಕೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಸೆಪ್ಟೆಂಬರ್ 2025, 10:49 IST
Last Updated 9 ಸೆಪ್ಟೆಂಬರ್ 2025, 10:49 IST
<div class="paragraphs"><p>ನೇಪಾಳದಲ್ಲಿ ಪ್ರತಿಭಟನೆ</p></div>

ನೇಪಾಳದಲ್ಲಿ ಪ್ರತಿಭಟನೆ

   

–ರಾಯಿಟರ್ಸ್ ಚಿತ್ರ

ಕಠ್ಮಂಡು: ನೇಪಾಳದಲ್ಲಿ ಪ್ರತಿಭಟನಾಕಾರರು ದೇಶದ ಸಂಸತ್ ಕಟ್ಟಡಕ್ಕೆ ಮಂಗಳವಾರ ಬೆಂಕಿ ಹಚ್ಚಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ಪ್ರಧಾನಿ ಕೆ.ಪಿ ಶರ್ಮಾ ಓಲಿ ರಾಜೀನಾಮೆ ನೀಡಿದ ಬೆನ್ನಲ್ಲೇ, ಸಂಸತ್ ಭವನಕ್ಕೆ ನುಗ್ಗಿದ ಆಕ್ರೋಶಿತ ಪ್ರತಿಭಟನಾಕಾರರ ಗುಂಪು ಕಟ್ಟಡಕ್ಕೆ ಬೆಂಕಿ ಹಚ್ಚಿದ್ದಾರೆ.

‘ನೂರಾರು ಪ್ರತಿಭಟನಾಕಾರರು ಸಂಸತ್ ಕಟ್ಟಡದ ಆವರಣಕ್ಕೆ ನುಗ್ಗಿ, ಮುಖ್ಯ ಕಟ್ಟಡಕ್ಕೆ ಬೆಂಕಿ ಹಚ್ಚಿದರು’ ಎಂದು ಸಂಸತ್ ಸಚಿವಾಲಯ ವಕ್ತಾರ ಎಎಫ್‌ಪಿ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಿದ ಸರ್ಕಾರದ ಕ್ರಮವನ್ನು ವಿರೋಧಿಸಿ ನೇಪಾಳದಲ್ಲಿ ಕಳೆದೆರಡು ದಿನಗಳಿಂದ ಹಿಂಸಾತ್ಮಕ ಪ್ರತಿಭಟನೆ ನಡೆಯುತ್ತಿದೆ. ರಾಜಧಾನಿ ಕಠ್ಮಂಡುವಿನ ಬೀದಿಗಳಲ್ಲಿ ಸಾವಿರಾರು ಮಂದಿ ಪ್ರತಿಭಟನಾಕಾರರು ಜಮಾಯಿಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಓಲಿಯವರ ಖಾಸಗಿ ನಿವಾಸಕ್ಕೂ ಬೆಂಕಿ ಹಚ್ಚಲಾಗಿದೆ ಎಂದು ‘ಎನ್‌ಐಎ’ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.