ಕಠ್ಮಂಡು: ಭಾರತ್ ಬಯೋಟೆಕ್ ಉತ್ಪಾದಿಸಿರುವ ‘ಕೋವ್ಯಾಕ್ಸಿನ್’ ಲಸಿಕೆಯನ್ನು ತುರ್ತು ಸಂದರ್ಭದಲ್ಲಿ ಬಳಸಲು ನೇಪಾಳದ ರಾಷ್ಟ್ರೀಯ ಔಷಧ ನಿಯಂತ್ರಣ ಪ್ರಾಧಿಕಾರ ಅನುಮೋದನೆ ನೀಡಿದೆ.
ನೇಪಾಳ ಈ ಮೂಲಕ, ಭಾರತ ಅಭಿವೃದ್ಧಿಪಡಿಸಿದ ಕೋವಿಡ್–19 ಲಸಿಕೆಯನ್ನು ಅನುಮೋದಿಸಿದ ಮೂರನೇ ರಾಷ್ಟ್ರವಾಗಿದೆ.
‘ಈ ಲಸಿಕೆಯೂ ಸೇರಿದಂತೆ ದೇಶದಲ್ಲಿ ಕೋವಿಡ್– 19 ವಿರುದ್ಧದ ಮೂರು ಲಸಿಕೆಗಳ ಬಳಕೆಗೆ ಅನುಮೋದನೆ ನೀಡಿದಂತಾಗಿದೆ’ ಎಂದು ಕಠ್ಮಂಡು ಪೋಸ್ಟ್ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.