ADVERTISEMENT

ಸಾಮಾಜಿಕ ಜಾಲತಾಣ ನಿಷೇಧ ವಾಪಸ್ ಪಡೆದ ನೇಪಾಳ ಸರ್ಕಾರ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2025, 1:49 IST
Last Updated 9 ಸೆಪ್ಟೆಂಬರ್ 2025, 1:49 IST
<div class="paragraphs"><p>ಕಠ್ಮಂಡುವಿನ ಸಂಸತ್‌ ಭವನದ ಹೊರಗೆ ಪೊಲೀಸರ ಜತೆ ಸಂಘರ್ಷದಲ್ಲಿ ತೊಡಗಿದ್ದ ಯುವಕರು </p></div>

ಕಠ್ಮಂಡುವಿನ ಸಂಸತ್‌ ಭವನದ ಹೊರಗೆ ಪೊಲೀಸರ ಜತೆ ಸಂಘರ್ಷದಲ್ಲಿ ತೊಡಗಿದ್ದ ಯುವಕರು

   

– ಪಿಟಿಐ ಚಿತ್ರ

ಕಠ್ಮಂಡು: ಸಾಮಾಜಿಕ ಜಾಲತಾಣ ವೇದಿಕೆಗಳನ್ನು ನಿಷೇಧಿಸುವ ತನ್ನ ನಿರ್ಧಾರವನ್ನು ಹಿಂತೆಗೆದುಕೊಂಡಿರುವುದಾಗಿ ನೇಪಾಳ ಸರ್ಕಾರ ಘೋಷಿಸಿದೆ. ನಿಷೇಧ ತೆರವುಗೊಳಿಸುವಂತೆ ಆಗ್ರಹಿಸಿ ಭಾರಿ ಪ್ರತಿಭಟನೆ ನಡೆದ ಬೆನ್ನಲ್ಲೇ ಈ ನಿರ್ಧಾರ ತೆಗೆದುಕೊಂಡಿದೆ.

ADVERTISEMENT

ಸಾಮಾಜಿಕ ಜಾಲತಾಣಗಳ ಮೇಲಿನ ನಿಷೇಧವನ್ನು ವಾಪಸ್ ಪಡೆಯಬೇಕು ಮತ್ತು ಭ್ರಷ್ಟಾಚಾರ ನಿಯಂತ್ರಿಸುವಂತೆ ಆಗ್ರಹಿಸಿ ಕಠ್ಮಂಡು ಸೇರಿದಂತೆ ನೇಪಾಳದ ವಿವಿಧೆಡೆ ಯುವಕರು ನಡೆಸಿದ ಬೃಹತ್‌ ಪ್ರತಿಭಟನೆ ಸೋಮವಾರ ಹಿಂಸಾಚಾರಕ್ಕೆ ತಿರುಗಿತ್ತು. ಈ ಘಟನೆಯಲ್ಲಿ 19 ಮಂದಿ ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ಸಾಮಾಜಿಕ ಜಾಲತಾಣ ವೇದಿಕೆಗಳನ್ನು ನಿಷೇಧಿಸುವ ತನ್ನ ನಿರ್ಧಾರವನ್ನು ಹಿಂತೆಗೆದುಕೊಂಡಿರುವುದಾಗಿ ನೇಪಾಳ ಸರ್ಕಾರ ಸೋಮವಾರ ತಡರಾತ್ರಿ ಘೋಷಿಸಿದೆ. ನಿಷೇಧ ತೆರವುಗೊಳಿಸುವಂತೆ ಆಗ್ರಹಿಸಿ ಭಾರಿ ಪ್ರತಿಭಟನೆ ನಡೆದ ಬೆನ್ನಲ್ಲೇ ಈ ನಿರ್ಧಾರ ತೆಗೆದುಕೊಂಡಿದೆ.

‘ಸಾಮಾಜಿಕ ಜಾಲತಾಣ ವೇದಿಕೆಗಳ ಮೇಲಿನ ನಿಷೇಧವನ್ನು ವಾಪಸ್ ತೆಗೆದುಕೊಳ್ಳುವ ನಿರ್ಧಾರವನ್ನು ಸಚಿವ ಸಂಪುಟದ ತುರ್ತು ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ’ ಎಂದು ನೇಪಾಳದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪೃಥ್ವಿ ಸುಬ್ಬಾ ಗುರುಂಗ್ ಪ್ರಕಟಿಸಿದ್ದಾರೆ.

ಸಾಮಾಜಿಕ ಜಾಲತಾಣ ವೇದಿಕೆಗಳ ಮೇಲಿನ ನಿಷೇಧವನ್ನು ಹಿಂಪಡೆಯಲಾಗಿದ್ದು, ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ ಎಂದು ಗುರುಂಗ್ ದೃಢಪಡಿಸಿದ್ದಾರೆ. ಜತೆಗೆ, ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಲಾಗುವುದು ಮತ್ತು ಗಾಯಾಳುಗಳಿಗೆ ಉಚಿತ ಚಿಕಿತ್ಸೆ ಒದಗಿಸಲಾಗುವುದು ಎಂದೂ ಅವರು ಮಾಹಿತಿ ನೀಡಿದ್ದಾರೆ.

ಫೇಸ್‌ಬುಕ್‌, ವ್ಯಾಟ್ಸ್‌ಆ್ಯಪ್‌, ಯೂಟ್ಯೂಬ್‌, ಎಕ್ಸ್‌ ಸೇರಿದಂತೆ 26 ಸಾಮಾಜಿಕ ಜಾಲತಾಣ ವೇದಿಕೆಗಳನ್ನು ಸೆ.5ರಂದು ನೇಪಾಳ ಸರ್ಕಾರ ನಿಷೇಧಿಸಿತ್ತು. ಸಚಿವ ಸಂಪುಟದಲ್ಲಿ ಇತ್ತೀಚೆಗೆ ಕೈಗೊಂಡ ನಿರ್ಧಾರದ ಅನ್ವಯ ಸಾಮಾಜಿಕ ಜಾಲತಾಣಗಳ ನೋಂದಣಿಯನ್ನು ಕಡ್ಡಾಯಗೊಳಿಸಿತ್ತು. ನೋಂದಣಿಯಾಗದ ಕಾರಣಕ್ಕೆ ನೇಪಾಳ ಸರ್ಕಾರ ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಿತ್ತು.

ನಕಲಿ ಖಾತೆಗಳ ಮೂಲಕ ದ್ವೇಷ ಭಾಷಣ, ಸುಳ್ಳು ಸುದ್ದಿಯನ್ನು ಹಬ್ಬಿಸಲು ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ, ಈ ಕ್ರಮಕೈಗೊಳ್ಳಲಾಗಿದೆ ಎಂದು ಸರ್ಕಾರ ಸಮರ್ಥಿಸಿಕೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.