ADVERTISEMENT

ನೇಪಾಳದಲ್ಲಿ ಪ್ರವಾಹ, ಭೂಕುಸಿತಕ್ಕೆ 38 ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ

ಪಿಟಿಐ
Published 3 ಜುಲೈ 2021, 15:10 IST
Last Updated 3 ಜುಲೈ 2021, 15:10 IST
ನೇಪಾಳದಲ್ಲಿ ಪ್ರವಾಹ, ಭೂಕುಸಿತ
ನೇಪಾಳದಲ್ಲಿ ಪ್ರವಾಹ, ಭೂಕುಸಿತ   

ಕಠ್ಮಂಡು: ನೇಪಾಳದಲ್ಲಿ ಕಳೆದ 20 ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಉಂಟಾದ ಪ್ರವಾಹದ ಸ್ಥಿತಿ ಹಾಗೂ ಭೂಕುಸಿತಕ್ಕೆ 38 ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಗೃಹ ಸಚಿವಾಲಯ ತಿಳಿಸಿದೆ.

ನೇಪಾಳದ ವಿವಿಧ ಭಾಗಗಳಲ್ಲಿ ಸಂಭವಿಸಿದ ನೈಸರ್ಗಿಕ ವಿಕೋಪದಲ್ಲಿ ಮೂವರು ಮಕ್ಕಳು ಸೇರಿದಂತೆ 24 ಮಂದಿ ನಾಪತ್ತೆಯಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಭಾರಿ ನೆರೆಗೆ 790 ಮನೆಗಳು ಮುಳುಗಿದ್ದು, 519 ಮನೆಗಳು ಹಾಗೂ 19 ಸೇತುವೆಗಳು ಹಾನಿಗೊಳಗಾಗಿವೆ.

ನೇಪಾಳ ಸೇನೆ, ಪೊಲೀಸ್, ಹಾಗೂ ಸಶಸ್ತ್ರ ಪೊಲೀಸ್ ಪಡೆಗಳು ರಕ್ಷಣಾ ಕಾರ್ಯಾಚರಣೆಗೆ ನೇತೃತ್ವ ವಹಿಸುತ್ತಿವೆ. ಇದುವರೆಗೆ 5,100ಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.