ಕಠ್ಮಂಡು: ನೇಪಾಳದ ಪೂರ್ವ ಭಾಗದಲ್ಲಿ 4.4 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಮೇಲ್ವಿಚಾರಣೆ ಮತ್ತು ಸಂಶೋಧನಾ ಕೇಂದ್ರ ತಿಳಿಸಿದೆ.
ಶುಕ್ರವಾರ ರಾತ್ರಿಯ ವೇಳೆ ಮಾಘಂಗ್ ಪ್ರದೇಶದ ಸಂಖುವಸಭಾ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲಘು ಭೂಕಂಪವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಹಿಮಾಲಯದ ತಪ್ಪಲಿನಲ್ಲಿರುವ ನೇಪಾಳವು ಹೆಚ್ಚಿನ ಭೂಕಂಪನ ಅಪಾಯದ ವಲಯದಲ್ಲಿದೆ. 2015ರಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿತ್ತು. ದುರ್ಘಟನೆಯಲ್ಲಿ 9 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.