ಕಠ್ಮಂಡು: ನೇಪಾಳದ ನೂತನ ಪ್ರಧಾನಿ ಸುಶೀಲಾ ಕಾರ್ಕಿ ಅವರನ್ನು ಭಾರತದ ರಾಯಭಾರಿ ನವೀನ್ ಶ್ರೀವಾತ್ಸವ ಅವರು ಮಂಗಳವಾರ ಇಲ್ಲಿನ ಸಿಂಘ ದರ್ಬಾರ್‌ನ ಕಚೇರಿಯಲ್ಲಿ ಭೇಟಿಯಾಗಿ ಪ್ರಧಾನಿ ಮೋದಿಯ ಅಭಿನಂದನಾ ಸಂದೇಶವನ್ನು ತಲುಪಿಸಿದ್ದಾರೆ.
ಈ ಬಗ್ಗೆ ‘ಎಕ್ಸ್’ನಲ್ಲಿ ಮಾಹಿತಿ ನೀಡಿರುವ ನೇಪಾಳದ ವಿದೇಶಾಂಗ ಸಚಿವಾಲಯ, ‘ಉಭಯ ದೇಶಗಳ ನಡುವಿನ ಸ್ನೇಹ ಮತ್ತು ನಿಕಟ ಸಹಕಾರಗಳ ಬಂಧವನ್ನು ಮತ್ತಷ್ಟು ಬಲಪಡಿಸಲು ಒಟ್ಟಾಗಿ ಕೆಲಸ ಮಾಡುವ ಭಾರತದ ಬದ್ಧತೆಯನ್ನು ಪ್ರಧಾನಿ ಮೋದಿ ಅಭಿನಂದನಾ ಸಂದೇಶದಲ್ಲಿ ವ್ಯಕ್ತಪಡಿಸಿದ್ದಾರೆ’ ಎಂದು ಹೇಳಿದೆ.
ಭ್ರಷ್ಟಾಚಾರ ಮತ್ತು ಸಾಮಾಜಿಕ ಮಾಧ್ಯಮ ನಿರ್ಬಂಧ ವಿರೋಧಿಸಿ ‘ಜೆನ್ ಝಿ’ ಯುವಕರು ನಡೆಸಿದ ವ್ಯಾಪಕ ಪ್ರತಿಭಟನೆಯ ನಂತರ ಪ್ರಧಾನಿ ಸ್ಥಾನಕ್ಕೆ ಕೆ.ಪಿ. ಶರ್ಮಾ ರಾಜೀನಾಮೆ ನೀಡಿದ್ದರು. ಇದರ ನಂತರ, ಭಾನುವಾರ ನೇಪಾಳದ ಮೊದಲ ಮಹಿಳಾ ಪ್ರಧಾನ ಮಂತ್ರಿಯಾಗಿ ಸುಶಿಲಾ ಕಾರ್ಕಿ ಅವರು ಅಧಿಕಾರಕ್ಕೇರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.