ADVERTISEMENT

ನೇಪಾಳ: ನಾಲ್ವರು ಭಾರತೀಯರು ಸೇರಿ 22 ಮಂದಿ ಪ್ರಯಾಣಿಸುತ್ತಿದ್ದ ವಿಮಾನ ನಾಪತ್ತೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಮೇ 2022, 7:27 IST
Last Updated 29 ಮೇ 2022, 7:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕಠ್ಮಂಡು: ನಾಲ್ವರು ಭಾರತೀಯರ ಸಹಿತ 22 ಮಂದಿ ಪ್ರಯಾಣಿಸುತ್ತಿದ್ದ ನೇಪಾಳದ ಲಘು ವಿಮಾನವೊಂದು ಸಂಪರ್ಕ ಕಳೆದುಕೊಂಡು ಭಾನುವಾರ ನಾಪತ್ತೆಯಾಗಿದೆ.

ತಾರಾ ಏರ್‌ ಸಂಸ್ಥೆಯ 9 ಎನ್‌ಎಇಟಿಮಾದರಿಯ ಎರಡು ಎಂಜಿನ್‌ನ ವಿಮಾನವು ಪೊಖ್ರಾದಿಂದ ಜೊಮ್‌ಸೊಮ್‌ಗೆ ಹೊರಟಿತ್ತು. ಬೆಳಿಗ್ಗೆ 9.55ರ ಸುಮಾರಿಗೆ ವಿಮಾನವು ನಿಯಂತ್ರಣ ಕಚೇರಿಯೊಂದಿಗೆ ಸಂಪರ್ಕ ಕಳೆದುಕೊಂಡಿತು ಎಂದು ಅಧಿಕಾರಿಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ನಾಪತ್ತೆಯಾಗಿರುವ ವಿಮಾನದ ಹುಡುಕಾಟಕ್ಕಾಗಿ ಎರಡು ಸೇನಾ ಹೆಲಿಕಾಪ್ಟರ್‌ಗಳನ್ನು ನಿಯೋಜನೆ ಮಾಡಲಾಗಿದೆ ಎಂದು ನೇಪಾಳ ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ADVERTISEMENT

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.