ಕಠ್ಮಂಡು: ಸರ್ಕಾರದ ವಿರುದ್ಧ ನೇಪಾಳದಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆ ವೇಳೆ ವಿವಿಧ ಜೈಲುಗಳಿಂದ ತಪ್ಪಿಸಿಕೊಂಡಿದ್ದ 3,700 ಕೈದಿಗಳನ್ನು ಮತ್ತೆ ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಕೆಲವು ಕೈದಿಗಳು ಸ್ವಯಂ ತಾವೇ ಪೊಲೀಸರಿಗೆ ಶರಣಾಗಿದ್ದಾರೆ. ಭಾರತಕ್ಕೆ ಪರಾರಿಯಾಗುತ್ತಿದ್ದ ಕೈದಿಗಳನ್ನು ಬಂಧಿಸಲು ಭಾರತೀಯ ಪೊಲೀಸರು ಸಹಾಯ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಆದರೆ, 10,320 ಕೈದಿಗಳು ಇನ್ನೂ ತಲೆಮರೆಸಿಕೊಂಡಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ತಪ್ಪಿಸಿಕೊಂಡಿರುವ ಕೈದಿಗಳನ್ನು ಬಂಧಿಸಲು ನೇಪಾಳ ಸೇನೆ, ಪೊಲೀಸ್ ಮತ್ತು ಸಶಸ್ತ್ರ ಪಡೆ ಕಾರ್ಯಾಚರಣೆ ಮುಂದುವರಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.