ಸುಶೀಲಾ ಕಾರ್ಕಿ
ರಾಯಿಟರ್ಸ್
ಕಠ್ಮಂಡು: ಯುವ ಸಮುದಾಯದ ಪ್ರತಿಭಟನೆ, ಹಿಂಸಾಚಾರದಿಂದಾಗಿ ಅರಾಜಕತೆ ಮನೆ ಮಾಡಿರುವ ನೇಪಾಳದಲ್ಲಿ ಮಧ್ಯಂತರ ಸರ್ಕಾರ ರಚನೆ ಕುರಿತಂತೆ ಪ್ರಯತ್ನಗಳು ಬುಧವಾರ ನಡೆದಿವೆ.
ಇನ್ನೊಂದೆಡೆ, ಘರ್ಷಣೆಯನ್ನು ಹತ್ತಿಕ್ಕುವ ಸಲುವಾಗಿ ನೇಪಾಳ ಸೇನೆಯು ರಾಷ್ಟ್ರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದ್ದು, ದೇಶವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದೆ.
ಮಧ್ಯಂತರ ಸರ್ಕಾರ ಮುನ್ನಡೆಸಲು, ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕಾರ್ಕಿ, ಕಠ್ಮಂಡು ಮೇಯರ್ ಬಾಲೇಂದ್ರ ಶಾ ಹಾಗೂ ವಿದ್ಯುತ್ ಮಂಡಳಿಯ ಮಾಜಿ ವ್ಯವಸ್ಥಾಪಕ ನಿರ್ದೇಶಕ ಕುಲಮಾನ್ ಘೀಸಿಂಗ್ ಅವರ ಹೆಸರುಗಳನ್ನು ಪ್ರತಿಭಟನೆ ನಡೆಸುತ್ತಿರುವ ಜೆನ್–ಝೀ ಯುವ ಸಮುದಾಯ ಪರಿಗಣಿಸುತ್ತಿದೆ. ಈ ಸಂಬಂಧ ಸಂಘಟನೆಯ ಮುಖಂಡರು ಆನ್‌ಲೈನ್ ಮೂಲಕ ವ್ಯಾಪಕ ಸಮಾಲೋಚನೆ ನಡೆಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.