ADVERTISEMENT

Nepal protest | ಭುಗಿಲೆದ್ದ ಆಕ್ರೋಶ: ಮೃತರ ಸಂಖ್ಯೆ 25ಕ್ಕೆ ಏರಿಕೆ

ರಾಯಿಟರ್ಸ್
Published 10 ಸೆಪ್ಟೆಂಬರ್ 2025, 10:45 IST
Last Updated 10 ಸೆಪ್ಟೆಂಬರ್ 2025, 10:45 IST
   

ಕಠ್ಮಂಡು: ನೇಪಾಳದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಮೃತರ ಸಂಖ್ಯೆ 25ಕ್ಕೆ ಏರಿದೆ. 633 ಜನ ಗಾಯಗೊಂಡಿದ್ದಾರೆ ಎಂದು ನೇಪಾಳದ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ.

ವಿಮಾನ ನಿಲ್ದಾಣ ಸೇನಾ ವಶಕ್ಕೆ

ದೇಶದಲ್ಲಿ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದ ಬೆನ್ನಲ್ಲೇ ತ್ರಿಭುವನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸೇನೆ ತನ್ನ ವಶಕ್ಕೆ ಪಡೆದುಕೊಂಡಿದೆ ಎಂದು ವರದಿಯಾಗಿದೆ. ನೇಪಾಳ ರಾಜಧಾನಿ ಕಠ್ಮಂಡು ಸೇರಿದಂತೆ ಹಲವೆಡೆ ಪ್ರತಿಭಟನೆಗಳು ಬುಧವಾರವೂ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಓಲಿ ತಲೆದಂಡ

ಸಾಮಾಜಿಕ ಜಾಲತಾಣಗಳ ಮೇಲಿನ ನಿಷೇಧವನ್ನು ವಾಪಸ್ ಪಡೆಯಬೇಕು ಮತ್ತು ಭ್ರಷ್ಟಾಚಾರ ನಿಯಂತ್ರಿಸುವಂತೆ ಆಗ್ರಹಿಸಿ ದೇಶವ್ಯಾಪಿ ನಡೆಯುತ್ತಿರುವ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದ ಬೆನ್ನಲ್ಲೇ ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪೊಲೀಸರು ಕೈಗೊಂಡ ಕ್ರಮದಿಂದಾಗಿ ಸೋಮವಾರ 19 ಪ್ರತಿಭಟನಕಾರರು ಮೃತಪಟ್ಟ ಕಾರಣಕ್ಕೆ ಓಲಿ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಸಾವಿರಾರು ಪ್ರತಿಭಟನಕಾರರು ಅವರ ನಿವಾಸಕ್ಕೆ ನುಗ್ಗಿ, ಘೋಷಣೆಗಳನ್ನೂ ಕೂಗಿದ್ದರು. ಇದಾದ ಸ್ವಲ್ಪ ಹೊತ್ತಿನ ಬಳಿಕ ಓಲಿ ಅವರು ತಮ್ಮ ರಾಜೀನಾಮೆ ಘೋಷಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.