ADVERTISEMENT

ನೇಪಾಳವು ಭಾರತ–ಚೀನಾದೊಂದಿಗೆ ಉತ್ತಮ ಸಂಬಂಧ ಹೊಂದಲಿದೆ: ಪ್ರಕಾಶ್‌ ಮಾನ್ ಸಿಂಗ್‌

ಪಿಟಿಐ
Published 15 ನವೆಂಬರ್ 2022, 12:28 IST
Last Updated 15 ನವೆಂಬರ್ 2022, 12:28 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕಠ್ಮಂಡು: ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲಿರುವ ನೇಪಾಳಿ ಕಾಂಗ್ರೆಸ್‌ ನೇತೃತ್ವದ ಸಮ್ಮಿಶ್ರ ಸರ್ಕಾರವು ನೆರೆಯ ಭಾರತ ಮತ್ತು ಚೀನಾದೊಂದಿಗೆ ಒಳ್ಳೆಯ ಸಂಬಂಧ ಹೊಂದಿರಲಿದೆಎಂದು ಆಡಳಿತಾರೂಢ ಪಕ್ಷದ ಪ್ರಮುಖ ನಾಯಕ ಪ್ರಕಾಶ್‌ ಮಾನ್ ಸಿಂಗ್‌ ತಿಳಿಸಿದ್ದಾರೆ.

‘ವಿದೇಶಾಂಗ ನೀತಿಯಲ್ಲಿ ನೇಪಾಳ ಸಮತೋಲನ ಕಾಯ್ದುಕೊಳ್ಳುವ ಅಗತ್ಯವಿದೆ. ನೆರೆಯ ರಾಷ್ಟ್ರಗಳೊಂದಿಗೆ ಯಾವುದೇ ರೀತಿಯ ಸಂಘರ್ಷ ಉಂಟಾದಲ್ಲಿ ಅದನ್ನು ಮಾತುಕತೆ ಮೂಲಕ, ಪ್ರಜಾಸತ್ತಾತ್ಮಕ ಮಾರ್ಗದಲ್ಲಿ ಪರಿಹರಿಸಿಕೊಳ್ಳಲು ನೇಪಾಳ ಯತ್ನಿಸುತ್ತದೆ’ ಎಂದು ತಿಳಿಸಿದ್ದಾರೆ.

‘ನಾವು ಅಲಿಪ್ತ ವಿದೇಶಾಂಗ ನೀತಿ ಅನುಸರಿಸುತ್ತೇವೆ. ರಾಷ್ಟ್ರೀಯ ಹಿತಾಸಕ್ತಿ ಮತ್ತು ಜನರ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ನೆರೆಯ ರಾಷ್ಟ್ರಗಳೂ ಸೇರಿದಂತೆ ಎಲ್ಲಾ ದೇಶಗಳೊಂದಿಗೆ ಉತ್ತಮ ಸಂಬಂಧ ಹೊಂದಲು ಇಚ್ಛಿಸುತ್ತೇವೆ’ ಎಂದು ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ.

ADVERTISEMENT

ನೇಪಾಳದಲ್ಲಿ ನ.20ರಂದು ಸಂಸತ್ ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.