ADVERTISEMENT

ಕಠ್ಮಂಡುವಿನಲ್ಲಿ ಕೋವಿಡ್‌ ನಿರ್ಬಂಧ ತೆರವು

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2022, 11:40 IST
Last Updated 7 ಫೆಬ್ರುವರಿ 2022, 11:40 IST
   

ಕಠ್ಮಂಡು: ಕೋವಿಡ್‌ ಸೋಂಕು ಗಣನೀಯ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಶಾಲೆ–ಕಾಲೇಜು ಪುನರಾರಂಭ ಸೇರಿದಂತೆ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ.

ಓಮೈಕ್ರಾನ್‌ ಸೋಂಕು ಉಲ್ಬಣಗೊಂಡಿದ್ದರಿಂದ ಕಳೆದ ತಿಂಗಳುನೇಪಾಳದಲ್ಲಿ ಕಟ್ಟುನಿಟ್ಟಿನ ನಿರ್ಬಂಧ ವಿಧಿಸಲಾಗಿತ್ತು. ಇದೀಗಚಿತ್ರಮಂದಿರ, ಜಿಮ್‌ ಮತ್ತು ಇತರೆ ಸಾರ್ವಜನಿಕ ಸ್ಥಳಗಳ ಮೇಲಿನ ನಿರ್ಬಂಧ ಸಡಿಲಗೊಳಿಸಲಾಗಿದೆ. ಆದರೆ ಕ್ರೀಡಾಂಗಣಕ್ಕೆ ಮಾತ್ರ ಶೇ 50ರಷ್ಟು ಪ್ರೇಕ್ಷಕರಬ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ‌ಸೋಮವಾರದಿಂದ ರಸ್ತೆ ಸಂಚಾರ ಮೇಲಿನನಿರ್ಬಂಧವನ್ನು ತೆರವುಗೊಳಿಸಲಾಗಿದೆ.

ಕೊರೊನಾ ಪಿಡುಗಿನ ಆರಂಭದಿಂದ ಇಲ್ಲಿಯವರೆಗೆ ದೇಶದ ಹತ್ತು ಲಕ್ಷ ಮಂದಿಗೆ ಸೋಂಕು ದೃಢಪಟ್ಟಿದ್ದು, 11,814 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.