ನವದೆಹಲಿ: ನೇಪಾಳ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರು ಏಪ್ರಿಲ್ 1ರಿಂದ 3 ದಿನಗಳ ಭಾರತದ ಪ್ರವಾಸ ಕೈಗೊಳ್ಳಲಿದ್ದಾರೆ.
ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧ ವೃದ್ಧಿಗಾಗಿ ಭಾರತದ ಪ್ರವಾಸ ಕೈಗೊಳ್ಳಲಿರುವ ದೇವುಬಾ ಅವರು, ಏಪ್ರಿಲ್ 2ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಅಲ್ಲದೆ ಈ ಇಬ್ಬರು ನಾಯಕರು, ಉತ್ತರ ಪ್ರದೇಶದ ವಾರಾಣಸಿಗೂ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.