ADVERTISEMENT

ನೇಪಾಳದ ಮಾಜಿ ಪ್ರಧಾನಿ ಪ್ರಚಂಡ ಭಾರತಕ್ಕೆ ಭೇಟಿ

ಪಿಟಿಐ
Published 15 ಜುಲೈ 2022, 14:11 IST
Last Updated 15 ಜುಲೈ 2022, 14:11 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಕಠ್ಮಂಡು (ಪಿಟಿಐ): ನೇಪಾಳದ ಮಾಜಿ ಪ್ರಧಾನಿ ಮತ್ತು ಕಮ್ಯುನಿಸ್ಟ್‌ ಪಾರ್ಟಿ ಆಫ್‌ ನೇಪಾಳದ (ಸಿಪಿಎನ್‌, ಮಾವೋವಾದಿ) ಅಧ್ಯಕ್ಷ ಪುಷ್ಪ ಕಮಲ್‌ ದಹಲ್‌ ಪ್ರಚಂಡ ಅವರು ಮೂರು ಶುಕ್ರವಾರದಿಂದ ದಿನಗಳ ಭೇಟಿಗಾಗಿ ಭಾರತಕ್ಕೆ ಬಂದಿದ್ದು, ಸರ್ಕಾರದ ಉನ್ನತ ಅಧಿಕಾರಿಗಳನ್ನು ಭೇಟಿಯಾಗಲಿದ್ದಾರೆ.‌

ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಆಹ್ವಾನದ ಮೇರೆಗೆಪುಷ್ಪ ಕಮಲ್‌ ದಹಲ್‌ ಪ್ರಚಂಡ ಅವರು ನವದೆಹಲಿಗೆ ಭೇಟಿ ನೀಡುತ್ತಿದ್ದಾರೆ ಎಂದು ಪ್ರಚಂಡ ಅವರ ಕಚೇರಿ ತಿಳಿಸಿದೆ.

‘ನಾನು ಭಾರತಕ್ಕೆ ಭೇಟಿ ನೀಡಿದ ವೇಳೆ, ಇತಿಹಾಸದುದ್ದಕ್ಕೂ ಬಗೆಹರಿಯದೆ ಉಳಿದಿರುವ ಹಲವಾರು ವಿಷಯಗಳ ಬಗ್ಗೆ ಮಾಹಿತಿ ಪಡೆಯಲಿದ್ದೇನೆ. ಈ ಭೇಟಿ ಸಮಸ್ಯೆಗಳನ್ನು ಪರಿಹರಿಸುವತ್ತ ಗಮನಹರಿಸಲಿದೆ’ ಎಂದು ಪ್ರಚಂಡ ಅವರು ಭಾರತಕ್ಕೆ ತೆರಳುವ ಮೊದಲು ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ADVERTISEMENT

ಈ ಭೇಟಿಯು ಉಭಯ ಪಕ್ಷಗಳ ಸಂಬಂಧವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ ಎಂದು ಸಿಪಿಎನ್‌ ಪಕ್ಷದ ಹಿರಿಯ ನಾಯಕ ಮತ್ತು ಸ್ಥಾಯಿ ಸಮಿತಿ ಸದಸ್ಯ ಗಣೇಶ್ ಶಾ ಹೇಳಿದ್ದಾರೆ.

ಪ್ರಚಂಡ ಅವರು ನೇಪಾಳಕ್ಕೆ ಹಿಂದಿರುಗುವ ಮುನ್ನ, ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.ಭಾರತ ಪ್ರವಾಸದ ವೇಳೆ ವಿದೇಶಾಂಗ ಸಚಿವ ಎಸ್ ಜೈಶಂಕರ್, ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೊಭಾಲ್ ಮತ್ತು ಬಿಜೆಪಿ ಅಧ್ಯಕ್ಷ ನಡ್ಡಾ ಅವರನ್ನೂ ಅವರು ಭೇಟಿಯಾಗಲಿದ್ದಾರೆ ಎಂದು ಕಠ್ಮಂಡು ಪೋಸ್ಟ್ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.