ಕಠ್ಮಂಡು: ನೇಪಾಳದ ಹಿರಿಯ ಕಮ್ಯುನಿಸ್ಟ್ ಮುಖಂಡ ಬಿಷ್ಣು ಬಹದ್ದೂರ್ ಮನಂಧರ್ (91) ಸೋಮವಾರ ನಿಧನರಾದರು.
ನ್ಯೂಮೋನಿಯಾದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
26 ವರ್ಷ ನೇಪಾಳ ಕಮ್ಯುನಿಷ್ಟ್ ಪಕ್ಷದ (ಯುನೈಟೆಡ್) ಪ್ರಧಾನ ಕಾರ್ಯದರ್ಶಿಯಾಗಿ ಅವರು ಕಾರ್ಯನಿರ್ವಹಿಸಿದ್ದರು.
ನೇಪಾಳದ ಪ್ರಜಾಪ್ರಭುತ್ವ ಪರ ಹೋರಾಟದಲ್ಲಿ ಸಕ್ರಿಯರಾಗಿದ್ದ ಮನಂಧರ್ ಅವರು, ಆರು ದಶಕಗಳಿಂದ ಕಮ್ಯುನಿಸ್ಟ್ ಚಳವಳಿಯೊಂದಿಗೆ ನಂಟು ಹೊಂದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.