ನ್ಯೂಯಾರ್ಕ್: ನೀಲಿಚಿತ್ರಗಳ ನಟಿಗೆ ಹಣ ನೀಡಿ ಬಾಯಿ ಮುಚ್ಚಿಸಿದ ಪ್ರಕರಣದಲ್ಲಿನ ಆರೋಪಕ್ಕೆ ಸಂಬಂಧಿಸಿದಂತೆ ತಾವು ಸಾರ್ವಜನಿಕವಾಗಿ ಏನನ್ನೂ ಹೇಳುವಂತಿಲ್ಲ ಎಂಬ ಆದೇಶವನ್ನು ರದ್ದುಪಡಿಸುವಂತೆ ಕೋರಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಸಲ್ಲಿಸಿದ್ದ ಅರ್ಜಿಯನ್ನು ನ್ಯೂಯಾರ್ಕ್ ಕೋರ್ಟ್ ತಿರಸ್ಕರಿಸಿದೆ.
ಪ್ರಕರಣದ ವಿಚಾರಣೆಯು ಕ್ರಮಬದ್ಧವಾಗಿ ನಡೆಯಲು ಸಾರ್ವಜನಿಕವಾಗಿ ಈ ಪ್ರಕರಣದ ಕುರಿತು ಟ್ರಂಪ್ ಅವರು ಏನನ್ನೂ ಹೇಳದೇ ಇರುವುದು ಮುಖ್ಯವಾಗಿದೆ ಎಂದು ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠವು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.