ನ್ಯೂಯಾರ್ಕ್: ನ್ಯೂಯಾರ್ಕ್ ಮೇಯರ್ ಎರಿಕ್ ಆ್ಯಡಮ್ಸ್ ಅವರು ಈ ವರ್ಷದ ಏಪ್ರಿಲ್ 14 ಅನ್ನು ‘ಡಾ.ಬಿ.ಆರ್. ಅಂಬೇಡ್ಕರ್ ದಿನ’ ಎಂಬುದಾಗಿ ಘೋಷಣೆ ಮಾಡಿದ್ದಾರೆ.
ಅಂತರರಾಷ್ಟ್ರೀಯ ವ್ಯವಹಾರಗಳ (ನ್ಯೂಯಾರ್ಕ್ ಮೇಯರ್ ಕಚೇರಿ) ಡೆಪ್ಯುಟಿ ಕಮಿಷನರ್ ದಿಲೀಪ್ ಚೌಹಾನ್ ಅವರು ಈ ಕುರಿತ ಘೋಷಣಾ ಪತ್ರವನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್ ಆಠವಲೆ ಅವರಿಗೆ ಹಸ್ತಾಂತರಿಸಿದರು.
‘ಅಂಬೇಡ್ಕರ್ ಅವರು ಭಾರತದ ಆರ್ಥಶಾಸ್ತ್ರಜ್ಞ, ರಾಜಕೀಯ ನಾಯಕ ಮತ್ತು ಸಮಾಜ ಸುಧಾರಕರಾಗಿದ್ದು, ಅವರು ಭಾರತ ಸಂವಿಧಾನದ ಕರಡು ರಚನಾ ಸಮಿತಿಯ ಅಧ್ಯಕ್ಷರಾಗಿದ್ದರು’ ಎಂದು ಘೋಷಣಾ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ವರ್ಷದಲ್ಲಿ ಒಂದು ದಿನದ ಮಟ್ಟಿಗೆ ಅಥವಾ ಒಂದು ವಾರ ಇಲ್ಲವೇ ಒಂದು ತಿಂಗಳು ಈ ರೀತಿಯ ಘೋಷಣೆಗಳನ್ನು ಮಾಡಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.