ADVERTISEMENT

ಎಲ್ ಸಾಲ್ವಡೋರ್‌ನ ಫುಟ್‌ಬಾಲ್ ಕ್ರೀಡಾಂಗಣದಲ್ಲಿ ಕಾಲ್ತುಳಿತ: 9 ಸಾವು

ಎಎಫ್‌ಪಿ
Published 21 ಮೇ 2023, 4:57 IST
Last Updated 21 ಮೇ 2023, 4:57 IST
   

ಸ್ಯಾನ್ ಸಾಲ್ವಡೋರ್: ರಿಪಬ್ಲಿಕ್ ಆಫ್ ಎಲ್ ಸಾಲ್ವಡೋರ್‌ನ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಸ್ಥಳೀಯ ಫುಟ್‌ಬಾಲ್ ಪಂದ್ಯಾವಳಿ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 9 ಮಂದಿ ಮೃತಪಟ್ಟಿದ್ದಾರೆ.

‘ಕಸಕಾಟ್ಲನ್ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 9 ಮಂದಿ ಮೃತಪಟ್ಟಿದ್ಧಾರೆ’ ಎಂದು ರಾಷ್ಟ್ರೀಯ ಸಿವಿಲ್ ಪೊಲೀಸ್ ಟ್ವಿಟರ್‌ನಲ್ಲಿ ತಿಳಿಸಿದೆ. ಗಾಯಗೊಂಡ ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಲಿಯಾಂಜಾ ಮತ್ತು ಎಫ್‌ಎಎಸ್ ತಂಡಗಳ ನಡುವಿನ ಪಂದ್ಯವನ್ನು ವೀಕ್ಷಿಸಲು ರಾಜಧಾನಿ ಸ್ಯಾನ್ ಸಾಲ್ವಡಾರ್‌ನ ಕ್ರೀಡಾಂಗಣಕ್ಕೆ ಪ್ರವೇಶಿಸಲು ಅಭಿಮಾನಿಗಳು ಯತ್ನಿಸಿದಾಗ ಕಾಲ್ತುಳಿತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.