
ನವದೆಹಲಿ: ಇರಾನ್‌ನಲ್ಲಿ ಪ್ರಸುತ್ತ ಸುಮಾರು 9 ಸಾವಿರ ಭಾರತೀಯರು ವಾಸಿಸುತ್ತಿದ್ದು, ಅವರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಶುಕ್ರವಾರ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇರಾನ್‌ಗೆ ಪ್ರಯಾಣ ಮಾಡುವುದನ್ನು ತಪ್ಪಿಸುವಂತೆ ದೇಶದ ನಾಗರಿಕರಿಗೆ ಸೂಚಿಸಲಾಗಿದೆ. ಪ್ರಸ್ತುತ ಇರಾನ್‌ನಲ್ಲಿ ಇರುವವರು ಆದಷ್ಟು ಬೇಗನೇ ಅಲ್ಲಿಂದ ಹಿಂದಿರುಗುವಂತೆ ಮನವಿ ಮಾಡಲಾಗಿದೆ’ ಎಂದು ಹೇಳಿದ್ದಾರೆ.
‘ಇರಾನ್‌ನ ಪರಿಸ್ಥಿತಿಯ ಬಗ್ಗೆ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ. ಈ ನಿಟ್ಟಿನಲ್ಲಿ ಅಲ್ಲಿರುವ ಭಾರತೀಯರಿಗೆ ಸಲಹೆ ಸೂಚನೆಗಳನ್ನು ನೀಡಿದ್ದೇವೆ. ಭಾರತೀಯರ ಸುರಕ್ಷತೆಗೆ ಸರ್ಕಾರ ಬದ್ಧವಾಗಿದೆ’ ಎಂದಿದ್ದಾರೆ.
ಇರಾನ್ ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಸರ್ಕಾರದ ವಿರುದ್ಧ ಇರಾನ್‌ನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಪ್ರತಿಭಟನಕಾರರಿಗೆ ಅಮೆರಿಕ ಬೆಂಬಲ ಸೂಚಿಸಿದೆ.
ಪ್ರತಿಭಟನೆಗಳನ್ನು ಹತ್ತಿಕ್ಕಲು ಸರ್ಕಾರ ಪ್ರಯತ್ನಿಸುತ್ತಿದ್ದು, ಅಮೆರಿಕದ ಮಧ್ಯಪ್ರವೇಶದಿಂದ ದೇಶದಲ್ಲಿ ಯುದ್ಧದ ಭೀತಿ ಮನೆ ಮಾಡಿದೆ.
ಏತನ್ಮಧ್ಯೆ, ಭಾರತೀಯ ನಾಗರಿಕರು ದೇಶದಕ್ಕೆ ಮರಳುವಂತೆ ವಿದೇಶಾಂಗ ಸಚಿವಾಲಯ ಸಲಹೆ ನೀಡಿದೆ. ಹಿಂತಿರುಗಲು ಬಯಸುವವರಿಗೆ ಸೂಕ್ತ ವ್ಯವಸ್ಥೆ ಮಾಡುವುದಾಗಿಯೂ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.