ADVERTISEMENT

ಒತ್ತೆಯಾಳುಗಳನ್ನು ಬಿಡುಗಡೆ ಮಾಡದೆ ಕದನ ವಿರಾಮ ಇಲ್ಲ: ಬೆಂಜಮಿನ್‌ ನೆತನ್ಯಾಹು

ಏಜೆನ್ಸೀಸ್
Published 9 ನವೆಂಬರ್ 2023, 2:31 IST
Last Updated 9 ನವೆಂಬರ್ 2023, 2:31 IST
ಬೆಂಜಮಿನ್‌ ನೆತನ್ಯಾಹು
ಬೆಂಜಮಿನ್‌ ನೆತನ್ಯಾಹು   

ಟೆಲ್ ಅವಿಲ್: ಗಾಜಾದಲ್ಲಿ ಹಮಾಸ್ ಬಂಡುಕೋರರು ಒತ್ತೆಯಾಳುಗಳನ್ನು ಬಿಡುಗಡೆ ಮಾಡದೆ ಕದನ ವಿರಾಮ ಮಾಡುವ ಪ್ರಶ್ನೆಯೇ ಇಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ.

ಆ ಮೂಲಕ ಕದನ ವಿರಾಮ ನಿರ್ಣಯ ಪ್ರಸ್ತಾಪವನ್ನು ಮಗದೊಮ್ಮೆ ತಿರಸ್ಕರಿಸಿದ್ದಾರೆ.

'ಎಲ್ಲ ವದಂತಿಗಳಿಗೆ ವಿರಾಮ ಹಾಡಲು ಬಯಸುತ್ತೇನೆ. ಗಾಜಾದಲ್ಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡದೆ ಕದನ ವಿರಾಮ ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಪುನರುಚ್ಚರಿಸುತ್ತೇನೆ' ಎಂದು ಅವರು ಹೇಳಿದ್ದಾರೆ.

ADVERTISEMENT

ಕೆಲವು ಒತ್ತೆಯಾಳುಗಳ ಬಿಡುಗಡೆ ಸೇರಿದಂತೆ ಮಾನವೀಯ ನೆಲೆಯಲ್ಲಿ ಯುದ್ಧಕ್ಕೆ ಸಣ್ಣ ವಿರಾಮ ನೀಡುವ ಕುರಿತು ಇಸ್ರೇಲ್ ಪರಿಗಣಿಸಲಿದೆ ಎಂದು ವರದಿಯಾಗಿತ್ತು. ಆದರೆ ಇಂತಹ ಮಧ್ಯಸ್ಥಿಕೆ ಮಾತುಕತೆಯನ್ನು ಇಸ್ರೇಲ್ ಪ್ರಧಾನಿ ತಳ್ಳಿ ಹಾಕಿದ್ದಾರೆ.

ಅಕ್ಟೋಬರ್ 7ರಂದು ಹಮಾಸ್ ಬಂಡುಕೋರರು ನಡೆಸಿದ ದಾಳಿಯಲ್ಲಿ 1,400ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದು, 239 ಮಂದಿಯನ್ನು ಒತ್ತೆಯಾಳಾಗಿ ಇರಿಸಲಾಗಿದೆ ಎಂದು ಇಸ್ರೇಲ್ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತೊಂದೆಡೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಗಾಜಾದಲ್ಲಿ ಈವರೆಗೆ 10,569 ಮಂದಿ ನಾಗರಿಕರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ಆರೋಗ್ಯ ಸಚಿವಾಲಯ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.