ADVERTISEMENT

ಝಾಕಿರ್‌ ನಾಯ್ಕ್ ಗಡಿಪಾರು ಮಾಹಿತಿ ಇಲ್ಲ: ವಿದೇಶಾಂಗ ಸಚಿವಾಲಯ

ಪಿಟಿಐ
Published 4 ಜುಲೈ 2018, 10:31 IST
Last Updated 4 ಜುಲೈ 2018, 10:31 IST
ಝಾಕಿರ್ ನಾಯ್ಕ್
ಝಾಕಿರ್ ನಾಯ್ಕ್   

ನವದೆಹಲಿ:ಇಸ್ಲಾಂ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್‌ನನ್ನು ಭಾರತಕ್ಕೆ ಗಡಿಪಾರು ಮಾಡುವ ಸಂಬಂಧ ಮಲೇಷ್ಯಾ ಸರ್ಕಾರದಿಂದ ಯಾವುದೇ ಮಾಹಿತಿ ಬಂದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬುಧವಾರ ತಿಳಿಸಿದೆ.

ಝಾಕಿರ್‌ನನ್ನು ಭಾರತಕ್ಕೆ ಗಡಿಪಾರು ಮಾಡುವಂತೆ ಜನವರಿಯಲ್ಲಿ ಮಲೇಷ್ಯಾ ಸರ್ಕಾರಕ್ಕೆ ಅಧಿಕೃತವಾಗಿ ಮನವಿ ಸಲ್ಲಿಸಲಾಗಿತ್ತು.

ಭಯೋತ್ಪಾದನೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ರಾಷ್ಟ್ರೀಯ ತನಿಖಾ ದಳ ಝಾಕಿರ್ ವಿರುದ್ಧ ವಿಚಾರಣೆ ನಡೆಸುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.