ADVERTISEMENT

ಬ್ರಿಟನ್‌ನಲ್ಲಿ ಭಯೋತ್ಪಾದನೆಗೆ ಜಾಗವಿಲ್ಲ: ಸುನಕ್‌

ರಾಯಿಟರ್ಸ್
Published 14 ಏಪ್ರಿಲ್ 2023, 6:31 IST
Last Updated 14 ಏಪ್ರಿಲ್ 2023, 6:31 IST
ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌
ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌   

ಲಂಡನ್‌: ಬ್ರಿಟನ್‌ನಲ್ಲಿ ಭಯೋತ್ಪಾದನೆಗೆ ಯಾವುದೇ ಅವಕಾಶವಿಲ್ಲ ಎಂದು ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ಗುರುವಾರ ಹೇಳಿದ್ದಾರೆ.

ಲಂಡನ್‌ನಲ್ಲಿನ ಭಾರತೀಯ ರಾಯಭಾರ ಕಚೇರಿ ಎದುರು ಏಪ್ರಿಲ್‌ ಆರಂಭದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಿಷಿ ಸುನಕ್‌ ದೂರವಾಣಿಯಲ್ಲಿ ಮಾತುಕತೆ ನಡೆಸಿದರು. ಈ ಹಿಂಸಾಚಾರವನ್ನು ಸುನಕ್‌ ಅವರು ಖಂಡಿಸುವುದಾಗಿ ಪುನರುಚ್ಚರಿಸಿದ್ದಾರೆ ಎಂದು ಸುನಕ್‌ ಅವರ ಕಚೇರಿ ಮಾಹಿತಿ ನೀಡಿದೆ.

ಬ್ರಿಟನ್‌ನಲ್ಲಿ ಭಯೋತ್ಪಾದನೆಗೆ ಯಾವುದೇ ಅವಕಾಶ ನೀಡುವುದಿಲ್ಲ. ಭಾರತೀಯ ರಾಯಭಾರ ಕಚೇರಿಯ ಸಿಬ್ಬಂದಿ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಸುನಕ್‌ ಒತ್ತಿ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.