ADVERTISEMENT

ಉತ್ತರ ಕೊರಿಯಾದಿಂದ ಮತ್ತೆ ಕ್ಷಿಪಣಿ ಪರೀಕ್ಷೆ

ಏಜೆನ್ಸೀಸ್
Published 10 ಮಾರ್ಚ್ 2020, 19:32 IST
Last Updated 10 ಮಾರ್ಚ್ 2020, 19:32 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಸೋಲ್‌: ಬಹು ದೂರದ ಗುರಿಯತ್ತ ಚಿಮ್ಮಬಲ್ಲ ನಿರ್ದೇಶಿತ ಕ್ಷಿಪಣಿಗಳ ಪರೀಕ್ಷೆಯನ್ನು ಉತ್ತರ ಕೊರಿಯಾ ಮಂಗಳವಾರ ಯಶಸ್ವಿಯಾಗಿ ನೆರವೇರಿಸಿತು.

ಉತ್ತರ ಕೊರಿಯಾ ಅಧ್ಯಕ್ಷ ಕಿಮ್‌ ಜಂಗ್‌ ಉನ್‌ ಈ ಪರೀಕ್ಷೆಗೆ ಸಾಕ್ಷಿಯಾಗಿದ್ದು, ಅಮೆರಿಕ ಮತ್ತು ದಕ್ಷಿಣ ಕೊರಿಯಾಕ್ಕೆ ಎಚ್ಚರಿಕೆ ನೀಡುವುದೇ ಈ ನಡೆಯ ಉದ್ದೇಶ ಎಂದು ವಿಶ್ಲೇಷಿಸಲಾಗುತ್ತಿದೆ.

ಕಳೆದ ವರ್ಷ ವಿಯೆಟ್ನಾಂ ರಾಜಧಾನಿ ಹನೋಯ್‌ಯಲ್ಲಿ ನಡೆದ ಕಿಮ್‌ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಡುವಿನ ಮಾತುಕತೆ ಮುರಿದುಬಿದ್ದ ಬೆನ್ನಲ್ಲೇ ಉತ್ತರ ಕೊರಿಯಾ ತನ್ನ ಶಸ್ತ್ರಾಸ್ತ್ರ ಸಾಮರ್ಥ್ಯ ವೃದ್ಧಿಸಿಕೊಳ್ಳಲು ಮುಂದಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.