ಸೋಲ್: ಶಬ್ದಕ್ಕಿಂತ ಐದು ಪಟ್ಟು ವೇಗವಾಗಿ ಚಲಿಸುವ ವಿಮಾನ ನಿಗ್ರಹ ಕ್ಷಿಪಣಿ ಪರೀಕ್ಷೆಯನ್ನು ಉತ್ತರ ಕೊರಿಯಾ ಯಶಸ್ವಿಯಾಗಿ ನಡೆಸಿದೆ.
ಪರಮಾಣು ಆಸ್ತ್ರ ಹೊಂದಿರುವ ಉತ್ತರ ಕೊರಿಯಾ ನಡೆಸಿರುವ ವಿಮಾನ ನಿಗ್ರಹ ಕ್ಷಿಪಣಿಗೆ ಎರಡು ರಾಡಾರ್ ನಿಯಂತ್ರಕಗಳು ಸೇರಿದಂತೆ ನೂತನ ತಂತ್ರಜ್ಞಾನಗಳನ್ನು ಅಳವಡಿಸಲಾಗಿದೆ. ಇದೊಂದು ಅಸಾಧಾರಣವಾದ ಯುದ್ಧ ಸಾಧನ ಎಂದು ಕೊರಿಯನ್ ಸೆಂಟ್ರಲ್ ನ್ಯೂಸ್ ಏಜೆನ್ಸಿಯ ಅಧಿಕಾರಿಗಳು ಹೇಳಿದ್ದಾರೆ.
ಇತ್ತೀಚಿನ ವಾರಗಳಲ್ಲಿ ಉತ್ತರ ಕೊರಿಯಾ ನಡೆಸಿದ 4ನೇ ಕ್ಷಿಪಣಿ ಪರೀಕ್ಷೆ ಇದಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ಹಡಗಿನ ಮೂಲಕ ಉಡಾಯಿಸಲಾಗುವ ದೂರಗಾಮಿ ಕ್ಷಿಪಣಿ ಪರೀಕ್ಷೆಯನ್ನು ನಡೆಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.