ಕೋಪನ್‌ಹೇಗನ್: ಕೋವಿಡ್ ರೋಗ ಇನ್ನೂ ಹತೋಟಿಗೆ ಬಾರದ ಕಾರಣ ಅಂತರರಾಷ್ಟ್ರೀಯ ಪ್ರಯಾಣವನ್ನು ಕೈಬಿಡುವುದು ಸೂಕ್ತ ಎಂದು ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಒ) ಯೂರೋಪ್ ನಿರ್ದೇಶಕ ಹಾನ್ಸ್ ಕ್ಲುಗೆ ಸಲಹೆ ನೀಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಈ ಸಂದರ್ಭದಲ್ಲಿ ನಾವು ಹೆಚ್ಚು ಎಚ್ಚರಿಕೆಯಿಂದ ಇರಬೇಕು ಮತ್ತು ಅಂತರರಾಷ್ಟ್ರೀಯ ಪ್ರಯಾಣ ಪುನರಾರಂಭಿಸುವುದರ ಬಗ್ಗೆ ಮರುಚಿಂತನೆ ನಡೆಸಬೇಕು’ ಎಂದೂ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.