ADVERTISEMENT

ರಷ್ಯಾ ಅಧ್ಯಕ್ಷ ಪುಟಿನ್‌–ಅಜಿತ್ ಡೋಭಾಲ್‌ ದ್ವಿಪಕ್ಷೀಯ ಮಾತುಕತೆ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2023, 10:30 IST
Last Updated 9 ಫೆಬ್ರುವರಿ 2023, 10:30 IST
ಅಜಿತ್ ಡೋಭಾಲ್‌
ಅಜಿತ್ ಡೋಭಾಲ್‌   

ನವದೆಹಲಿ: ರಷ್ಯಾ ಪ್ರವಾಸದಲ್ಲಿರುವ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೋಭಾಲ್‌ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಗುರುವಾರ ಭೇಟಿಯಾಗಿದ್ದಾರೆ.

ಇಲ್ಲಿನ ಅಧ್ಯಕ್ಷರ ನಿವಾಸದಲ್ಲಿ ಅಜಿತ್ ಡೋಭಾಲ್‌ ಅವರು ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡಿ, ಸುಮಾರು 2 ಗಂಟೆಗಳಿಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.

ಡೋಭಾಲ್‌ ಅವರು ಪುಟಿನ್ ಜೊತೆ, ದ್ವಿಪಕ್ಷೀಯ ಮಾತುಕತೆ ಮತ್ತು ಪ್ರಾದೇಶಿಕ ವಿಷಯಗಳ ಬಗ್ಗೆ ವ್ಯಾಪಕ ಚರ್ಚೆ ನಡೆಸಿದರು ಎಂದು ರಷ್ಯಾದಲ್ಲಿರುವ ಭಾರತದ ರಾಯಭಾರಿ ಕಚೇರಿ ಟ್ವೀಟ್‌ ಮಾಡಿದೆ.

ADVERTISEMENT

ಭಾರತ ಮತ್ತು ರಷ್ಯಾ ನಡುವಿನ ಸಹಕಾರ ಒಪ್ಪಂದಗಳು ಸೇರಿದಂತೆ ವಿವಿಧ ಕಾರ್ಯತಂತ್ರಗಳ ಸಹಭಾಗಿತ್ವವನ್ನು ಜಾರಿಗೆ ತರುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆದಾಗ್ಯೂ ಚರ್ಚೆಯ ಅಂಶಗಳು ಬಹಿರಂಗವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.