ಅಜಿತ್ ದೋವಲ್ ಹಾಗೂ ರಷ್ಯಾದ ಉಪಪ್ರಧಾನಿ ಡೆನಿಸ್ ಮಾಂಟುರೊವ್
ಮಾಸ್ಕೊ: ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಅವರು ರಷ್ಯಾದ ಉಪ ಪ್ರಧಾನಿ ಡೆನಿಸ್ ಮಂತುರೊವ್ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಮಿಲಿಟರಿ– ತಾಂತ್ರಿಕ ಸಹಕಾರ, ನಾಗರಿಕ ವಿಮಾನ ತಯಾರಿಕೆ, ರಾಸಾಯನಿಕ ಉದ್ಯಮ ಸೇರಿದಂತೆ ಇತರ ಯೋಜನೆಗಳ ಅನುಷ್ಠಾನದ ಕುರಿತು ಶುಕ್ರವಾರ ಚರ್ಚಿಸಿದರು.
ಗುರುವಾರ ಪುಟಿನ್ ಅವರನ್ನು ಭೇಟಿಯಾಗಿದ್ದ ಡೊಭಾಲ್, ದ್ವಿಪಕ್ಷೀಯ ಸಹಕಾರದ ಕುರಿತು ಚರ್ಚಿಸಿದರು. ಬಾಹ್ಯ ಒತ್ತಡಗಳ ಹೊರತಾಗಿಯೂ ರಷ್ಯಾದೊಂದಿಗೆ ಎಲ್ಲಾ ಕ್ಷೇತ್ರಗಳಲ್ಲಿ ಸಹಕಾರ ಮುಂದುವರಿಸುವ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದರು.
ಈ ವರ್ಷದ ಕೊನೆಯಲ್ಲಿ ಭಾರತಕ್ಕೆ ಭೇಟಿ ನೀಡುವಂತೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿ ಆಹ್ವಾನ ನೀಡಿದರು. ಪುಟಿನ್ ಅವರು ಆಹ್ವಾನವನ್ನು ಸ್ವೀಕರಿಸಿದರು ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.