ADVERTISEMENT

ದಕ್ಷಿಣ ಕೊರಿಯಾದ ಸೋಲ್‌ನಲ್ಲಿ ಕಾಲ್ತುಳಿತ: 120 ಮಂದಿ ಸಾವು

ಏಜೆನ್ಸೀಸ್
Published 29 ಅಕ್ಟೋಬರ್ 2022, 20:45 IST
Last Updated 29 ಅಕ್ಟೋಬರ್ 2022, 20:45 IST
ಕಾಲ್ತುಳಿತದಲ್ಲಿ ಗಾಯಗೊಂಡವರನ್ನು ಆಂಬುಲೆನ್ಸ್‌ಗಳಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು –ಎಎಫ್‌ಪಿ ಚಿತ್ರ
ಕಾಲ್ತುಳಿತದಲ್ಲಿ ಗಾಯಗೊಂಡವರನ್ನು ಆಂಬುಲೆನ್ಸ್‌ಗಳಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು –ಎಎಫ್‌ಪಿ ಚಿತ್ರ   

ಸೋಲ್‌: ದಕ್ಷಿಣ ಕೊರಿಯಾದ ರಾಜಧಾನಿ ಸೋಲ್‌ನಲ್ಲಿ ಶನಿವಾರ ಸಂಜೆ ಹ್ಯಾಲೋವಿನ್‌ ಉತ್ಸವ ಆಚರಣೆಯ ವೇಳೆ ಕಾಲ್ತುಳಿತ ಉಂಟಾಗಿ 120 ಮಂದಿ ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಲ್‌ನಲ್ಲಿ ಪಾರ್ಟಿ ನಡೆಯುವ ಪ್ರಮುಖ ಸ್ಥಳವಾದ ಹ್ಯಾಮಿಲ್ಟನ್‌ ಹೋಟೆಲ್‌ನ ಸಮೀಪ ನೆರೆದಿದ್ದ ಭಾರಿ ಸಂಖ್ಯೆಯ ಜನರು ಪಕ್ಕದ ಕಿರಿದಾದ ರಸ್ತೆಯಲ್ಲಿ ಸಾಗುತ್ತಿದ್ದಾಗ ಅಲ್ಲಿ ನೂಕುನುಗ್ಗಲು ಸಂಭವಿಸಿ ಕಾಲ್ತುಳಿತ ಉಂಟಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

‘ನೂಕುನುಗ್ಗಲಿನಲ್ಲಿ ಹಲವರಿಗೆ ಹೃದಯಸ್ತಂಭನವಾಗಿದೆ. ಕೆಲವರು ಕಾಲ್ತುಳಿತದಿಂದ ಕೊನೆಯುಸಿರೆಳೆದರು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ’ ಎಂದೂ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.