ADVERTISEMENT

ಓಮೈಕ್ರಾನ್: ಆಫ್ರಿಕಾದಲ್ಲಿ 5 ವರ್ಷದೊಳಗಿನ ಮಕ್ಕಳ ಆಸ್ಪತ್ರೆ ದಾಖಲಾತಿ ಹೆಚ್ಚಳ

ಪಿಟಿಐ
Published 3 ಡಿಸೆಂಬರ್ 2021, 13:33 IST
Last Updated 3 ಡಿಸೆಂಬರ್ 2021, 13:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜೋಹಾನ್ಸ್‌ಬರ್ಗ್: ಕೊರೊನಾ ವೈರಸ್‌ನ ರೂಪಾಂತರ ತಳಿ ಓಮೈಕ್ರಾನ್‌ನಿಂದ 5 ವರ್ಷದ ಒಳಗಿನ ವಯಸ್ಸಿನ ಮಕ್ಕಳು ಆಸ್ಪತ್ರೆಗೆ ದಾಖಲಾಗುವುದು ಹೆಚ್ಚಾಗಿದೆ ಎಂದು ದಕ್ಷಿಣ ಆಫ್ರಿಕಾದ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಓಮೈಕ್ರಾನ್‌ನಿಂದಾಗಿ ದಕ್ಷಿಣ ಆಫ್ರಿಕಾದಲ್ಲೀಗ ದೃಢಪಡುತ್ತಿರುವ ಕೋವಿಡ್ ಪ್ರಕರಣಗಳ ಸಂಖ್ಯೆ ದುಪ್ಪಟ್ಟಾಗಿದೆ.

‘ಕೋವಿಡ್ ನಾಲ್ಕನೇ ಅಲೆಯಲ್ಲಿ ಐದು ವರ್ಷದ ಒಳಗಿನ ಮಕ್ಕಳು ಆಸ್ಪತ್ರೆಗೆ ದಾಖಲಾಗುತ್ತಿರುವ ಸಂಖ್ಯೆ ಹೆಚ್ಚಾಗಿದೆ’ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ. ಕಳೆದ 7 ದಿನಗಳಲ್ಲಿ ಆಸ್ಪತ್ರೆಗೆ ದಾಖಲಾಗುವ ಮಕ್ಕಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ ಎಂದು ದಕ್ಷಿಣ ಆಫ್ರಿಕಾದ ಸಾಂಕ್ರಾಮಿಕ ರೋಗಗಳ ರಾಷ್ಟ್ರೀಯ ಸಂಸ್ಥೆ (ಎನ್‌ಐಸಿಡಿ) ಹೇಳಿದೆ.

ಒಟ್ಟಾರೆಯಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವ ಮಕ್ಕಳ ಪೈಕಿ ಶೇ 10ರಷ್ಟು 2 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ ಎಂದು ಎನ್‌ಐಸಿಡಿಯ ಆರೋಗ್ಯ ತಜ್ಞರೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.