ADVERTISEMENT

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ: ವ್ಯಕ್ತಿ ಸಾವು, 5 ಮಂದಿಗೆ ಗಾಯ

ರಾಯಿಟರ್ಸ್
Published 13 ಫೆಬ್ರುವರಿ 2024, 3:15 IST
Last Updated 13 ಫೆಬ್ರುವರಿ 2024, 3:15 IST
<div class="paragraphs"><p>ಗುಂಡಿನ ದಾಳಿ</p></div>

ಗುಂಡಿನ ದಾಳಿ

   

ನ್ಯೂಯಾರ್ಕ್ ಸಿಟಿ: ಬ್ರಾಂಕ್ಸ್‌ನ ಸುರಂಗ ಮಾರ್ಗದಲ್ಲಿ ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ ಎಂದು ನ್ಯೂಯಾರ್ಕ್ ಸಿಟಿ ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಮೆಟ್ರೊಪಾಲಿಟನ್‌ ಸಾರಿಗೆ ಪ್ರಾಧಿಕಾರದ ಪ್ರಕಾರ ನ್ಯೂಯಾರ್ಕ್‌ನ ಸುರಂಗಮಾರ್ಗದಲ್ಲಿ 2023ರಲ್ಲಿ 570 ದಾಳಿ ಪ್ರಕರಣಗಳು ವರದಿಯಾಗಿವೆ.

2022ರಲ್ಲಿ ಬ್ರೂಕ್ಲಿನ್ ಮೂಲಕ ಹಾದುಹೋಗುವ ರೈಲಿನಲ್ಲಿ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದ. ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದರು.

ಸುರಂಗ ಮಾರ್ಗದ ನಿಲ್ದಾಣಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮೇಯರ್ ಎರಿಕ್ ಆಡಮ್ಸ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.