ADVERTISEMENT

ಭಾರತ– ಪಾಕ್‌ ಸಂಬಂಧ: ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವುದೇ ಮಾರ್ಗ– ಇಮ್ರಾನ್

ಪಿಟಿಐ
Published 8 ಫೆಬ್ರುವರಿ 2023, 13:44 IST
Last Updated 8 ಫೆಬ್ರುವರಿ 2023, 13:44 IST
ಇಮ್ರಾನ್‌ ಖಾನ್‌
ಇಮ್ರಾನ್‌ ಖಾನ್‌   

ಲಾಹೋರ್‌: ‘ಪ್ರಧಾನಿ ನರೇಂದ್ರ ಮೋದಿ ಅವರು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಮರುಸ್ಥಾಪಿಸುವುದೊಂದೇ ಭಾರತದೊಂದಿಗಿನ ಸಂಬಂಧವನ್ನು ಮುಂದುವರಿಸಲು ಇರುವ ಏಕೈಕ ಮಾರ್ಗ’ ಎಂದು ಪಾಕಿಸ್ತಾನದ ಪದಚ್ಯುತ ಪ್ರಧಾನಿ ಇಮ್ರಾನ್ ಖಾನ್ ಮಂಗಳವಾರ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ಭಾರತ ಸರ್ಕಾರವು 2019ರಲ್ಲಿ ರದ್ದುಪಡಿಸಿತ್ತು.

ಪಾಕಿಸ್ತಾನದ ಆಡಳಿತರೂಢ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ಪ್ರಸ್ತುತದ ಸರ್ಕಾರವು ನನ್ನ ವಿರುದ್ಧ ಸಂಚು ರೂಪಿಸಿತು. ರಾಜಕೀಯದಿಂದ ನನ್ನನ್ನು ದೂರವಿಡಲು ದೇಶದ ಎಲ್ಲ ಪ್ರಬಲ ಶಕ್ತಿಗಳು ಪ್ರಯತ್ನಿಸುತ್ತಿವೆ’ ಎಂದು ಆರೋಪಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.